ಕೊಪ್ಪಳ: ಮೂರು ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಹಮ್ಮಿಕೊಂಡದ್ದ ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಅಂಗಡಿ ಮುಂಗುಟ್ಟುಗಳು ವಾಹನಗಳು ಎಂದಿನಂತೆ ಸಂಚಾರ ಆರಂಭಿಸಿದ್ದವು.
ಪ್ರತಿಭಟನಾಕಾರರು ಊರು ಸುತ್ತಿ ಅಂಗಡಿಗಳನ್ನು ಬಂದ್ ಮಾಡಿಸಲು ಬಂದಾಗ ವ್ಯಾಪಾರಸ್ಥರ ಜೊತೆ ವಾಗ್ವಾದ ನಡೆಯಿತು.
ಬೆರಳಣಿಯಲ್ಲಿ ಇದ್ದ ಪ್ರತಿಭಟನಾಕಾರರು ಕೇಂದ್ರ ಬಸ್ ನಿಲ್ದಾಣದ ಎದುರು ಸಾಂಕೇತಿಕ ಧರಿಣಿ ನಡೆಸಿದರು.
ಕೆಲವರು ಇಟ್ಟಿಗೆಯನ್ನು ತಲೆಯ ಮೇಲೆ ಇಟ್ಟುಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.