
ಕೊಪ್ಪಳ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲುವಿನತ್ತ ಸಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಇಲ್ಲಿನ ಅಶೋಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಭಾಗ್ಯನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಜರುಗಿತು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ನಿತೀಶ್ ಕುಮಾರ್ ಹೆಸರುಗಳನ್ನು ಕೂಗಿ ಜೈಕಾರ ಹಾಕಿದ ಮುಖಂಡರು ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು. ದೊಡ್ಡ ಸರಪಳಿ ಇರಿಸಿ ಪಟಾಕಿಗಳನ್ನು ಸಿಡಿಸಿದರು. ಬಿಜೆಪಿ, ಜೆಡಿಎಸ್ ಹಾಗೂ ಎನ್‌ಡಿಎ ಹೆಸರಿನಲ್ಲಿ ಘೋಷಣೆಗಳನ್ನು ಕೂಗಿದರು. ಮತ ಕಳವು ಹೆಸರಿನಲ್ಲಿ ಕಾಂಗ್ರೆಸ್ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವಂತೆ ಮಾಡಿದ್ದರಿಂದ ಬಿಹಾರದ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಮುಖಂಡರು ಹೇಳಿದರು. ರಾಹುಲ್ ಗಾಂಧಿ ಇನ್ನು ಮುಂದಾದರೂ ಪಾಠ ಕಲಿಯಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.