ADVERTISEMENT

ಕುಷ್ಟಗಿ | ಬೈಕ್‌ಗೆ ವಾಹನ ಡಿಕ್ಕಿ; ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 16:13 IST
Last Updated 1 ಸೆಪ್ಟೆಂಬರ್ 2024, 16:13 IST
ಪರಸಪ್ಪ
ಪರಸಪ್ಪ   

ಕುಷ್ಟಗಿ: ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಡೇಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಮೃತರನ್ನು ತಾಲ್ಲೂಕಿನ ವಣಗೇರಿ ಗ್ರಾಮದ ಹನಮಂತ ಚನ್ನಬಸಪ್ಪ ಗುರಿಕಾರ(30) ಮತ್ತು ಪರಸಪ್ಪ ಶರಣಪ್ಪ ಗುರಿಕಾರ (31) ಎಂದು ಗುರುತಿಸಲಾಗಿದೆ.

ತೀವ್ರವಾಗಿ ಗಾಯಗೊಂಡಿರುವ ಇನ್ನೊಬ್ಬ ಸವಾರ ಪರಶುರಾಮ ಗುರಿಕಾರ ಎಂಬುವವರನ್ನು ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‌ ಮೇಲೆ ಇಳಕಲ್‌ ಕಡೆಗೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಎಸ್‌ಐ ಹನುಮಂತಪ್ಪ ತಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದರು. ಅಪಘಾತಕ್ಕೆ ಕಾರಣವಾಗಿರುವ ವಾಹನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನಮಂತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.