ADVERTISEMENT

ಕನಕಗಿರಿ | ಬೈಕ್‌ಗೆ ಟಿಪ್ಪರ್ ಡಿಕ್ಕಿ; ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 7:29 IST
Last Updated 12 ಜನವರಿ 2026, 7:29 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಕನಕಗಿರಿ: ಅಕ್ರಮವಾಗಿ ಮರಳು ತುಂಬಿಕೊಂಡು ಹೊರಟ್ಟಿದ್ದ ಟಿಪ್ಪರ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ಮೃತ ವೈಕ್ತಿಯನ್ನು ನವಲಿ ಗ್ರಾಮದ ರುದ್ರಗೌಡ ದಳಪತಿ(60) ಎಂದು ಗುರುತಿಸಲಾಗಿದೆ.

ಡಂಕನಕಲ್ ಗ್ರಾಮದಲ್ಲಿ ಚಿಕಿತ್ಸೆ ಪಡೆದುಕೊಂಡು ಮಗನ‌ ಜತೆಗೆ ಬೈಕ್ ಮೂಲಕ ನವಲಿಗೆ ಬರುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಮರಳು ತುಂಬಿಕೊಂಡಿದ್ದ ಟಿಪ್ಪರ್ ಗಂಗಾವತಿ ಕಡೆಗೆ ಹೊರಟಿತ್ತು ಎನ್ನಲಾಗಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.