ADVERTISEMENT

‘ನಾಯಕ ಸಮಾಜಕ್ಕೆ ಅನ್ಯಾಯ ಮಾಡಿದ ಬಿಜೆಪಿ’

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 12:12 IST
Last Updated 10 ಆಗಸ್ಟ್ 2021, 12:12 IST
ರಮೇಶ ನಾಯಕ
ರಮೇಶ ನಾಯಕ   

ಕನಕಗಿರಿ: ‘ಬಿಜೆಪಿ, ವಾಲ್ಮೀಕಿ ನಾಯಕ ಸಮಾಜಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ’ ಎಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ನಾಯಕ ಸಮಾಜದ ಮುಖಂಡ ರಮೇಶ ನಾಯಕ ದೂರಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ವಾಲ್ಮೀಕಿ ಸಮಾಜಕ್ಕೆ ಶೇ. 7. 5 ರಷ್ಟು ಮೀಸಲಾತಿ ಕೊಡುವುದಾಗಿ ಭರವಸೆ ನೀಡಿ ಎರಡು ವರ್ಷ ಗತಿಸಿದೆ. ಇಲ್ಲಿವರೆಗೂ ನ್ಯಾಯ ಒದಗಿಸಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ವಾಲ್ಮೀಕಿ ಸಮಾಜದ ಹಿರಿಯ ಮುಖಂಡ ಬಿ. ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಪ್ರಚಾರ ಮಾಡಿ ಅಧಿಕಾರಕ್ಕೆ ಬಂದರೂ ಇಲ್ಲಿವರೆಗೆ ಉಪ ಮುಖ್ಯಮಂತ್ರಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಿಲ್ಲ. ರಾಜ್ಯದಲ್ಲಿ ಪ್ರಚಾರ ಮಾಡಿ ಓಟು ಪಡೆಯಲು ಮಾತ್ರ ರಾಮುಲು ಅವರನ್ನು ಬಿಜೆಪಿ ಬಳಸಿಕೊಂಡಿದೆ ಎಂದು ಅವರು ಆರೋಪಿಸಿದರು.

ADVERTISEMENT

ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಪರಿಶಿಷ್ಟ ಜಾತಿಯವರಿಗೆ ₹5 ಲಕ್ಷ ಅನುದಾನ ನೀಡುವುದಾಗಿ ವಸತಿ ಸಚಿವ ಶ್ರೀನಿವಾಸ ಪೂಜಾರಿ ಘೋಷಣೆ ಮಾಡಿದ್ದು, ಪರಿಶಿಷ್ಟ ಪಂಗಡದವರಿಗೂ ಏಕೆ ನೀಡಿಲ್ಲ. ಈ ಹಿಂದಿನ ಸರ್ಕಾರದಲ್ಲಿ ಯೋಜನೆಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸಮಾನವಾಗಿ ಸಿಗುತ್ತಿದ್ದವು. ಸಚಿವರು ಇಲ್ಲಿ ಒಡೆದು ಆಳುವ ನೀತಿ ಅನುಸರಿಸಿದ್ದಾರೆ. ಪರಿಶಿಷ್ಟ ಪಂಗಡದವರಿಗೂ ₹5 ಲಕ್ಷ ಅನುದಾನ ನೀಡಬೇಕು ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.