ಕೊಪ್ಪಳ: ‘ಜಾತಿಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪಟ್ಟಿಯಲ್ಲಿ ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್, ಮುಸ್ಲಿಂ ಎನ್ನುವ ಉಪಜಾತಿಗಳ ಪಟ್ಟಿಯನ್ನು ಬೇಡಿಕೆ ಮೇರೆಗೆ ತಯಾರಿಸಲಾಗಿದೆ. ಆದರೆ ಜನ ತಮ್ಮ ಜಾತಿಯನ್ನು ದಾಖಲಿಸಲು ಸಂಪೂರ್ಣ ಸ್ವತಂತ್ರರಾಗಿದ್ದಾರೆ’ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪಟ್ಟಿಯಲ್ಲಿ ಸೃಜಿಸಲಾಗಿರುವ ಕಾಲಂಗಳ ಬಗ್ಗೆ ಆಕ್ಷೇಪವಿದ್ದರೆ ಆಯೋಗಕ್ಕೆ ದೂರು ನೀಡಲಿ. ಪಟ್ಟಿಯಲ್ಲಿ ನಾಸ್ತಿಕ ಕಾಲಂ ಕೂಡ ನೀಡಲಾಗಿದೆ. ಸಮೀಕ್ಷೆ ಆರಂಭವಾಗುವ ಮೊದಲೇ ಬಿಜೆಪಿ ಈ ವಿಷಯದಲ್ಲಿ ವಿನಾಕಾರಣ ರಾಜಕಾರಣ ಮಾಡಿ ಜನರ ದಾರಿ ತಪ್ಪಿಸುತ್ತಿದೆ. ಸಮೀಕ್ಷೆ ವೇಳೆ ಜನರಿಗೆ ತೊಂದರೆಯಾಗದಂತೆ ಒಂದು ದಿನ ಮೊದಲೇ ಅರ್ಜಿ ನೀಡುವಂತೆ ಗಣತಿದಾರರಿಗೆ ತಿಳಿಸಲಾಗಿದೆ’ ಎಂದರು.
6ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅ. 6ರಂದು ಕೊಪ್ಪಳಕ್ಕೆ ಬರಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.