ಕನಕಗಿರಿ: ‘ಬಿಜೆಪಿ ಸರ್ಕಾರ ಯಾವ ಸಂದರ್ಭದಲ್ಲಿಯೂ ಕೂಡ ಸಂವಿಧಾನಬದ್ಧವಾಗಿ ನಡೆದುಕೊಂಡಿಲ್ಲ. ಮತ ಕಳ್ಳತನ ಮಾಡಿಯೇ ಬಿಜೆಪಿ ಮೂರು ಬಾರಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ’ ಎಂದು ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ ಹುಲಿಹೈದರ ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿಜೆಪಿಯ ಮತ ಕಳ್ಳತನ ವಿರೋಧಿಸಿ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲಗಾಂಧಿ ಬೆಂಬಲಿಸಿ ಗುರುವಾರ ರಾತ್ರಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ತಮ್ಮ ಅಧಿಕಾರದ ಆಸೆಗಾಗಿ ಬಿಜೆಪಿಯು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸಂವಿಧಾನ ವಿರೋಧಿ ಸರ್ಕಾರವಾಗಿದೆ. ಬಿಜೆಪಿಯವರಿಗೆ ಸಂವಿಧಾನದ ಮೇಲೆ ನಂಬಿಕೆ ಇದ್ದರೆ ಮತ ಪತ್ರದ ಮೂಲಕ ಚುನಾವಣೆ ಎದುರಿಸಲಿ’ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದಪ್ಪ ನೀರ್ಲೂಟಿ, ತಾ.ಪಂ. ಮಾಜಿ ಅಧ್ಯಕ್ಷ ಬಸಂತಗೌಡ ಪಾಟೀಲ, ಮುಖಂಡ ಚಂದ್ರೆಗೌಡ ಪೊಲೀಸ್ ಪಾಟೀಲ ಮಾತನಾಡಿದರು. ಪ. ಪಂ. ಉಪಾಧ್ಯಕ್ಷ ಕಂಠಿರಂಗ ನಾಯಕ, ಸದಸ್ಯ ಅನಿಲಕುಮಾರ, ರಾಕೇಶ ಕಂಪ್ಲಿ, ನಾಮ ನಿರ್ದೇಶಕ ಶಾಂತಪ್ಪ ಬಸರಿಗಿಡದ, ಆಶ್ರಯ ಸಮಿತಿ ಸದಸ್ಯ ಕನಕಪ್ಪ ಮ್ಯಾಗಡೆ, , ಆರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕೋಬ ಭೋವಿ, ಎನ್‌ಎಸ್‌ಯುಐ ಅಧ್ಯಕ್ಷ ಮಂಜುನಾಥ, ನಗರ ಘಟಕದ ಅಧ್ಯಕ್ಷ ರವಿ ಪಾಟೀಲ,
ಕೆಡಿಪಿ ಮಾಜಿ ಸದಸ್ಯ ನಾಗಪ್ಪ ಹುಗ್ಗಿ, ಪ್ರಮುಖರಾದ ನಾಗೇಶ ಬಡಿಗೇರ, ಖಾದರಬಾಷ ಇತರರು ಇದ್ದರು.
ಇದಕ್ಕೂ ಪೂರ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಮೊಂಬತ್ತಿ ಬೆಳಕಿನಲ್ಲಿ ಪಾದಯಾತ್ರೆ ಮೂಲಕ ವಾಲ್ಮೀಕಿ ವೃತ್ತದವರೆಗೆ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.