ADVERTISEMENT

ರಾಹುಲ್‌ ಬಂದರೆ ಬಿಜೆಪಿಗೆ ಲಾಭ: ಪಾಟೀಲ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2022, 5:35 IST
Last Updated 4 ಆಗಸ್ಟ್ 2022, 5:35 IST

ಕೊಪ್ಪಳ: ‘ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿದ್ದಾರೋ, ಆ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋತಿದೆ. ಈಗ ಅವರು ಕರ್ನಾಟಕಕ್ಕೆ ಬಂದಿರುವುದರಿಂದ ನಮಗೇ ಲಾಭವಾಗಲಿದೆ. ಇಲ್ಲಿಯೂ ಕಾಂಗ್ರೆಸ್ ಸೋಲಲಿದೆ’ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮಕ್ಕೆ ರಾಹುಲ್‌ ಗಾಂಧಿ ಬಂದಿದ್ದು ನಮಗೆ ಸಂತೋಷ ತಂದಿದೆ. ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಅವರು ಏನೇ ಮಾಡಿದರು ಅಧಿಕಾರಕ್ಕೆ ಬರುವುದಿಲ್ಲ’ ಎಂದರು.

‘ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಹಿಟ್ನಾಳದಿಂದ ಗಂಗಾವತಿ ತನಕ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ₹450 ಕೋಟಿ ಪ್ರಸ್ತಾವ ಸರ್ಕಾರದ ಮುಂದಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ಅವೈಜ್ಞಾನಿಕ ಟೋಲ್‌ಗಳಿದ್ದರೆ ತೆರವು ಮಾಡಲಾಗುವುದು’ ಎಂದರು.

ADVERTISEMENT

ರಸ್ತೆಗಳ ಅಭಿವೃದ್ದಿಗೆ ಸರ್ಕಾರ ಅನುದಾನ ಕೊಡುತ್ತಿಲ್ಲ ಎನ್ನುವ ಕೊಪ್ಪಳ ಶಾಸಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ‘ಅಪ್ಪ ಶಾಸಕರಾಗಿದ್ದರು. ಈಗ ಮಗ ಶಾಸಕ. ಅವರ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಎಷ್ಟು ಹಣ ತಂದಿದ್ದಾರೆ ಹೇಳಲಿ ನೋಡೊಣ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.