ADVERTISEMENT

ಮಸ್ಕಿಯಲ್ಲಿ ಬಿಜೆಪಿ ಗೆಲುವು ಖಚಿತ

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 13:49 IST
Last Updated 10 ಏಪ್ರಿಲ್ 2021, 13:49 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ   

ತಾವರಗೇರಾ: ‘ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಪ್ರತಾಪಗೌಡ ಪಾಟೀಲ ಗೆಲುವು ಸಾಧಿಸಲಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನುವ ಕಾಂಗ್ರೆಸ್‌ ಪಕ್ಷದ ಆರೋಪವನ್ನು ಅವರು ತಳ್ಳಿ ಹಾಕಿದರು.

‘ಹಣ ಹಂಚಿ ಗೆಲ್ಲುವುದು ಬಿಜೆಪಿ ಸಂಸ್ಕೃತಿ ಅಲ್ಲ. ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲುವ ಭೀತಿಯ ಕಾರಣ ಹತಾಶೆಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ಗಲಾಟೆ ಮಾಡಿಸಲಾಗುತ್ತಿದೆ. ಗೂಂಡಾ ವರ್ತನೆ ತೋರಿಸುತ್ತಿದ್ದಾರೆ. ಇದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದರು.

ADVERTISEMENT

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಉತ್ತರ ಕರ್ನಾಟಕದ ಜನರ ಮೇಲೆ ಅಭಿಮಾನ ಇದೆ’ ಎಂದು ಹೇಳಿದರು.

‘ಮಸ್ಕಿ ವಿಧಾನಸಭಾ ಕೇತ್ರದಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ’ ಎಂದರು.

ಸಂಸದ ಸಂಗಣ್ಣ ಕರಡಿ, ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ರಾಷ್ಟ್ರೀಯ ಕಾರ್ಯದರ್ಶಿ ಸಿ.ವಿ ಚಂದ್ರಶೇಖರ, ಶಾಸಕರಾದ ಹಾಲಪ್ಪ ಆಚಾರ್, ಪರಣ್ಣ ಮುನವಳ್ಳಿ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ ಹಾಗೂ ಕೆ.ಮಹೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.