ADVERTISEMENT

ರೆಡ್‌ಕ್ರಾಸ್‌ನಿಂದ ರಕ್ತದಾನಿಗಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:56 IST
Last Updated 18 ಜೂನ್ 2025, 15:56 IST
ಕೊಪ್ಪಳದಲ್ಲಿ ಮಂಗಳವಾರ ನಡೆದ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚುಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು
ಕೊಪ್ಪಳದಲ್ಲಿ ಮಂಗಳವಾರ ನಡೆದ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚುಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು   

ಕೊಪ್ಪಳ: ‘ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಕ್ತಭಂಡಾರವನ್ನಷ್ಟೇ ನಡೆಸುವುದಿಲ್ಲ. ವಿಪತ್ತು ನಿರ್ವಹಣೆ ಸೇರಿದಂತೆ ಹತ್ತು ಹಲವು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಮಂಗಳವಾರ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ವಿಶ್ವರಕ್ತದಾನಿಗಳ ದಿನದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಅಸಹಾಯಕರಿಗೆ ಸಹಾಯ ಮಾಡುವುದು, ನೊಂದವರಿಗೆ ನೆರವು ನೀಡುವುದು, ವಿಪತ್ತು ಸಂದರ್ಭದಲ್ಲಿ ತುರ್ತು  ಪರಿಹಾರ ಮತ್ತು ಚಿಕಿತ್ಸೆ ನೀಡುವ ಅಂತರರಾಷ್ಟ್ರೀಯ ಸಂಸ್ಥೆ ಇದಾಗಿದೆ’ ಎಂದರು.

ಡಿಎಚ್‌ಒ ಡಾ.ಲಿಂಗರಾಜ ಟಿ., ಜಿಲ್ಲಾ ಶಾಖೆ ಸಭಾಪತಿ ಸೋಮರಡ್ಡಿ ಅಳವಂಡಿ, ಸಂಸ್ಥೆಯ ರಾಜ್ಯ ಶಾಖೆಯ ಉಪಸಭಾಪತಿ ಡಾ. ಶ್ರೀನಿವಾಸ ಹ್ಯಾಟಿ, ಅಮೃತಾ ಸಜ್ಜನ, ಶಿವನಗೌಡ ಪಾಟೀಲ, ರಮೇಶ ತುಪ್ಪದ, ಡಾ. ಮಂಜುನಾಥ ಸಜ್ಜನ, ಡಾ.ರವಿಕುಮಾರ ದಾನಿ, ಶಿವಕುಮಾರ ದಾನರಡ್ಡಿ, ಡಾ.ಗವಿ ಪಾಟೀಲ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.