ಎನ್.ಎಸ್. ಭೋಸರಾಜು
ಕೊಪ್ಪಳ: ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದರಷ್ಟೇ ಮನೆ ಮಂಜೂರು ಮಾಡಲಾಗುತ್ತದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಬಿ.ಆರ್. ಪಾಟೀಲ ನೀಡಿದ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗುವಂಥದ್ದು ಎನೂ ಇಲ್ಲ. ಅವರು ಹಿರಿಯ ರಾಜಕಾರಣಿಯಾಗಿದ್ದು ನೇರವಾಗಿ ಮಾತನಾಡುವ ಸ್ವಭಾವ ರೂಢಿಸಿಕೊಂಡಿದ್ದಾರೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್. ಭೋಸರಾಜು ಹೇಳಿದರು.
ನಗರದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದ ಆಡಳಿತದಲ್ಲಿ ಹಿಂದೆ ಈ ರೀತಿ ಆಗಿವೆ. ಪಾಟೀಲರ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿರ್ದಿಷ್ಟವಾಗಿ ಯಾವ ಪ್ರಕರಣದಲ್ಲಿ ಅನ್ಯಾಯವಾಗಿದೆ ಎನ್ನುವುದನ್ನು ದಾಖಲೆ ಸಮೇತ ದೂರು ನೀಡುವಂತೆ ಪಾಟೀಲರಿಗೆ ಹೇಳಿದ್ದೇನೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯರಿಂದ ಹಿಡಿದು ಶಾಸಕರ ತನಕ ಯಾರು ಎನೇ ಕಾನೂನುಬದ್ಧವಾಗಿ ಹೇಳಿದರೂ ಕೆಲಸವಾಗುತ್ತದೆ ಎಂದರು.
ಸಿಗದ ಸಹಕಾರ: ಅಂತರರಾಜ್ಯ ಜಲ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ರಾಜ್ಯಗಳ ಸಹಮತವಿದ್ದರೂ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ನವಲಿ ಸಮಾನಾಂತರ ಜಲಾಶಯ ಯೋಜನೆ ಕಾರ್ಯಗತಕ್ಕೆ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ಯೋಜನೆ ರೂಪಿಸಿವೆ. ಮೂರೂ ರಾಜ್ಯಗಳ ಜನಪ್ರತಿನಿಧಿಗಳು ಕೇಂದ್ರದ ಸಹಕಾರ ಕೋರಿದರೂ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.