ಕೊಪ್ಪಳ: ಹೂಗಾರ ಸಮಾಜದ ವತಿಯಿಂದ ಜು. 9ರಂದು ಬೆಳಿಗ್ಗೆ 10.30ಕ್ಕೆ ಮುದ್ದೇಬಿಹಾಳದ ಕೃಷ್ಣಮಂಗಲ ಭವನದಲ್ಲಿ ವಧು-ವರರ ರಾಜ್ಯಮಟ್ಟದ ಸಮಾವೇಶ ಹಾಗೂ ಸುರೇಶ ಬಿ. ಹೂಗಾರ ಅವರು ಬರೆದ ‘ಹೂಗಾರ ಸಮಾಜದ ಸಾಂಸ್ಕೃತಿಕ ಇತಿಹಾಸ’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಹೂಗಾರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಾಜದ ಪ್ರಕಟಣೆ ಕೋರಿದೆ.
ವಧು-ವರ ಆಕಾಂಕ್ಷಿಗಳು ಹಾಗೂ ಪಾಲಕರು ಕಡ್ಡಾಯವಾಗಿ ಮೊದಲೇ ಹೆಸರು ನೋಂದಾಯಿಸಬೇಕು. ಬಯೋಡೇಟಾ ಹಾಗೂ ಫೋಟೊಗಳನ್ನು ತರಬೇಕು. ಇನ್ನಷ್ಟು ಮಾಹಿತಿಗೆ 8050492499 ಸಂಪರ್ಕಿಸಿ.
ಮತದಾರರ ಕರಡು ಪಟ್ಟಿ ಪ್ರಕಟ
ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಕೊಪ್ಪಳ ತಾಲ್ಲೂಕಿನ ಎಂಟು ಜಿಲ್ಲಾ ಪಂಚಾಯಿತಿ ಮತ್ತು 25 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಇಲ್ಲಿನ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಹಾಗೂ ಅಧೀನ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದೆ.
ಕ್ಷೇತ್ರದ ಮತದಾರರು ಪಟ್ಟಿಯನ್ನು ತಮ್ಮ ಸಮೀಪದ ಮತಗಟ್ಟೆ ಅಧಿಕಾರಿಗಳ ಹತ್ತಿರ ಅಥವಾ ತಹಶೀಲ್ದಾರ್ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಬಹುದು. ಆಕ್ಷೇಪಣೆ ಸಲ್ಲಿಸಲು ಜುಲೈ 4 ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು 7 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ಕೋರಿದೆ.
ಕೆಡಿಪಿ ಸಭೆ ಜು. 1ರಂದು
ಜಿಲ್ಲಾ ಪಂಚಾಯಿತಿ ವತಿಯಿಂದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2023-24ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜು. 1ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂದು ಜಿ.ಪಂ. ಸಿಇಒ ರಾಹುಲ್ ರತ್ನಂ ಪಾಂಡೆಯ ತಿಳಿಸಿದ್ದಾರೆ.
ಆಯ್ಕೆಗಾಗಿ ಅರ್ಜಿ ಆಹ್ವಾನ
ಜಿಲ್ಲಾ ಪಂಚಾಯಿತಿಯ ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಯೋಜನೆಯಡಿ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಸ್ಥೆಯು ಸಾಂಸ್ಥಿಕ ನಿರ್ಮಾಣ, ಸಾಮರ್ಥ್ಯ ಬಲವರ್ಧನೆ, ಸಾಮಾಜಿಕ ಅಭಿವೃದ್ಧಿ, ಹಣಕಾಸು ಸೇರ್ಪಡೆ, ಕೃಷಿ ಜೀವನೋಪಾಯ, ಡಿ.ಡಿ.ಯು.ಜಿ.ಕೆ.ವೈ. ಯೋಜನೆಯಡಿ ಕೌಶಲ ತರಬೇತಿ ಕಾರ್ಯಕ್ರಮ, ಈ ಐದು ಕ್ಷೇತ್ರಗಳಲ್ಲಿ ಅನುಭವವಿರುವ ಮತ್ತು ಕ್ರಿಯಾಶೀಲ ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಗಳ ಮೂಲಕ ತಾಂತ್ರಿಕ ಸೇವೆಗಳನ್ನು ಪಡೆದುಕೊಳ್ಳಲಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ತೇರ್ಗಡೆಯಾಗಿರಬೇಕು. ಕನಿಷ್ಠ 5 ವರ್ಷ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿರಬೇಕು. ತರಬೇತಿ ಪಡೆದುಕೊಳ್ಳಲು ಅಥವಾ ನೀಡಲು ವಿವಿಧ ಸಂಸ್ಥೆಗಳಿಗೆ ಪ್ರವಾಸ ಮಾಡಲು ಸಿದ್ಧರಿರಬೇಕು. ಇನ್ನಷ್ಟು ಮಾಹಿತಿಗೆ ಖುದ್ದಾಗಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ದೊರೆಯುವ ನಿಗದಿತ ನಮೂನೆ ಪಡೆದುಕೊಂಡು ಜು. 5ರ ಒಳಗೆ ಅರ್ಜಿ ಸಲ್ಲಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.