ADVERTISEMENT

ಅಂಜನಾದ್ರಿ ಬಳಿ ಪೊಲೀಸ್ ಠಾಣೆ ನಿರ್ಮಿಸಿ: ಪರಣ್ಣ ಮುನವಳ್ಳಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2025, 16:01 IST
Last Updated 10 ಮಾರ್ಚ್ 2025, 16:01 IST
<div class="paragraphs"><p>ಪರಣ್ಣ ಮುನವಳ್ಳಿ</p></div>

ಪರಣ್ಣ ಮುನವಳ್ಳಿ

   

ಗಂಗಾವತಿ: ತಾಲ್ಲೂಕಿನ ಸಾಣಾಪುರ ಕೆರೆ ಸಮೀಪ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಂ ಸ್ಟೇ ಒಡತಿ ಮೇಲೆ ನಡೆದ ಅತ್ಯಾಚಾರ ಖಂಡನೀಯ. ಇದಕ್ಕೆ ಕಾರಣವಾದ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಗೃಹಮಂತ್ರಿ ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

ಗಂಗಾವತಿ ತಾಲ್ಲೂಕಿನ ಆನೆಗೊಂದಿ ಭಾಗದ ಅಂಜನಾದ್ರಿ, ಪಂಪಾಸರೋವರ, ಸಾಣಾಪುರ ಕೆರೆ, ವಾಟರ್ ಫಾಲ್ಸ್ ವಿದೇಶಿ, ಸ್ವದೇಶಿ ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣ. ಇಲ್ಲಿಗೆ ಸಾವಿರಾರು ಸಂಖ್ಯೆ ಪ್ರವಾಸಿಗರು ಭೇಟಿ ನೀಡಲಿದ್ದು, ಇವರಿಗೆ ಅಗತ್ಯ ರಕ್ಷಣೆ ಕಲ್ಪಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಎಲ್ಲ ಪ್ರವಾಸಿಗರ ರಕ್ಷಣೆಗಾಗಿ ಆನೆಗೊಂದಿ ಭಾಗದ ಅಂಜನಾದ್ರಿ ಬೆಟ್ಟದಲ್ಲಿ ಪೊಲೀಸ್ ಠಾಣೆ ನಿರ್ಮಿಸಿ, ಇಲ್ಲಿ ಜಿಲ್ಲಾ ಪೊಲೀಸ್ ಮೀಸಲು ಪಡೆ ನಿಯೋಜಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸುವ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.