ಸಾಂದರ್ಭಿಕ ಚಿತ್ರ
ಕೊಪ್ಪಳ: ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ನನ್ನ ಮನೆಯ ಬಳಿ ನಿಲ್ಲಿಸಲಾಗಿದ್ದ ಸಂಘದ ಕಾರು ಯಾರೊ ಕಳ್ಳತನ ಮಾಡಿದ್ದಾರೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೋಮವಾರ ರಾತ್ರಿ ಎಫ್ಐಆರ್ ದಾಖಲಾಗಿದೆ.
ಭಾನುವಾರ ಮಧ್ಯರಾತ್ರಿ ಯಾರೊ ಕಾರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಅದು ₹26 ಲಕ್ಷ ಮೌಲ್ಯ ಹೊಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.