ಕಾರಟಗಿ: ತಾಲ್ಲೂಕಿನ ಮೈಲಾಪುರದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಗುಂಪು ಕಟ್ಟಿಕೊಂಡು ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಕೊಲೆಗೆ ಯತ್ನ ಮಾಡಿದ ಆರೋಪದ ಮೇಲೆ 23 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೈಲಾಪುರ ಗ್ರಾಮದ ನಿವಾಸಿ ಮಲ್ಲಮ್ಮ ಯಮನೂರ ಗೋಡಿನಾಳ ಎಂಬುವವರು ದೂರು ಸಲ್ಲಿಸಿದ್ದಾರೆ.
‘ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಭಾನುವಾರ ತನ್ನ ಪತಿ ಯಮನೂರ ಗೋಡಿನಾಳ ಸ್ನೇಹಿತರೊಂದಿಗೆ ನಿಂತಿದ್ದಾಗ ಶಿವಶಂಕರರೆಡ್ಡಿ ಗೋನಾಳ, ಮೇಘರಾಜ, ಉಮೇಶ, ಶರಣಬಸವ, ದೊಡ್ಡಬಸವ ಸೇರಿದಂತೆ 23 ಜನರನ್ನೊಳಗೊಂಡ ಗುಂಪು ಅವಾಚ್ಯ ಶಬ್ದಗಳಿಂದ ನಿಂದಿಸಿ, ಏಕಾಏಕಿಯಾಗಿ ಹಲ್ಲೆ ಮಾಡಿದರು. ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡರು. ಅವರ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.