ಅಮಾನತು
ಕೊಪ್ಪಳ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆಗೆ ನಿಯೋಜನೆ ಮಾಡಿದ್ದರೂ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಜೂಲಕುಂಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ತಳವಾರ ಎಂಬುವವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಭಾನುವಾರ ಆದೇಶಿಸಿದ್ದಾರೆ.
ರಾಮಪ್ಪ ತಳವಾರ ತಮಗೆ ವಹಿಸಿದ ಸಮೀಕ್ಷೆ ಕೆಲಸ ಆರಂಭಿಸಿಲ್ಲ. ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಮನೆಗೆ ಭೇಟಿ ನೀಡಿದರೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದ್ದರಿಂದ ಕುಷ್ಟಗಿ ಸಿಆರ್‌ಪಿ ನೀಡಿದ ವರದಿ ಆಧರಿಸಿ ಅಮಾನತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.