
ಕನಕಗಿರಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಸರ್ಕಾರಿ ಕಚೇರಿ ಹಾಗೂ ಶಾಲಾ–ಕಾಲೇಜು ಮತ್ತು ಪಂಚಮಸಾಲಿ ಸಮಾಜದ ಆಶ್ರಯದಲ್ಲಿ ವೀರ ಮಹಿಳೆ ಕಿತ್ತೂರುರಾಣಿ ಚನ್ನಮ್ಮ ಅವರ ಜಯಂತಿಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.
ಪಟ್ಟಣದ ಚನ್ನಮ್ಮ ವೃತ್ತದಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿ, ‘ಚನ್ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಮೊಟ್ಟ ಮೊದಲ ಮಹಿಳೆ. ಅವರ ದಿಟ್ಟ, ಕೆಚ್ಚೆದೆಯ ಹೋರಾಟ ಸ್ಮರಣೀಯ’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಸದಸ್ಯರಾದ ಶರಣೆಗೌಡ ಪಾಟೀಲ, ಅನಿಲಕುಮಾರ ಬಿಜ್ಜಳ, ಗಂಗಾಧರ ಚೌಡ್ಕಿ, ಪಂಚಸೈನ್ಯ ತಾಲ್ಲೂಕು ಅಧ್ಯಕ್ಷ ನಾಗರಾಜ ಭಾವಿಕಟ್ಟಿ, ಸುಳೇಕಲ್ ಗ್ರಾ.ಪಂ ಉಪಾಧ್ಯಕ್ಷ ಶಿವಾನಂದ ವಂಕಲಕುಂಟಿ, ಮಾಜಿ ಸದಸ್ಯ ನಾಗೇಶ ರೊಟ್ಟಿ, ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಂತೇಶ ಕೊಡ್ಲಿ, ಪ್ರಮುಖರಾದ ಅನ್ನು ಚಳ್ಳಮರದ, ರವಿ ಪಾಟೀಲ, ಪ್ರಶಾಂತ ತೆಗ್ಗಿನಮನಿ, ಶರಣಬಸವ ಕಲಕೇರಿ, ಮದರಸಾಬ, ನಾಗೇಶ ಬಡಿಗೇರ, ಪಾಮಣ್ಣ ಬಡಿಗೇರ, ನಿಂಗಪ್ಪ ಪೂಜಾರ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಹಜರತಹುಸೇನ ಭಾಗವಹಿಸಿದ್ದರು.
ಬಿಜೆಪಿ ಕಚೇರಿ: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ರಾಣಿ ಚನ್ನಮ್ಮ ಜಯಂತಿ ಆಚರಿಸಲಾಯಿತು. ಮಂಡಲ ಅಧ್ಯಕ್ಷ ಸಣ್ಣ ಕನಕಪ್ಪ, ಮಾಜಿ ಅಧ್ಯಕ್ಷ ಮಹಾಂತೇಶ ಸಜ್ಜನ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುರೇಶ ಗುಗ್ಗಳಶೆಟ್ರ, ಹನುಮಂತಪ್ಪ ಬಸರಿಗಿಡದ, ಪ್ರಮುಖರಾದ ಶರಣಪ್ಪ ಭಾವಿಕಟ್ಟಿ ಇದ್ದರು.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ ಸೇರಿದಂತೆ ಪಕ್ಷದ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು ಭಾಗವಹಿಸಿದ್ದರು.
ತಹಶೀಲ್ದಾರ್ ಕಚೇರಿ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಜಯಂತಿಯಲ್ಲಿ ತಹಶೀಲ್ದಾರ್ ವಿಶ್ವನಾಥ ಮುರುಡಿ, ಶಿರಸ್ತೇದಾರ ಅನಿತಾ ಇಂಡಿ, ನೌಕರರ ಸಂಘದ ತಾಲ್ಲೂಕು ಕೋಶಾಧ್ಯಕ್ಷ ಗುರುಲಿಂಗಯ್ಯ, ಸಿಬ್ಬಂದಿ ಶರಣಬಸವ ಚಳಗೇರಿ, ಅಮರೇಶ ಇದ್ದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಚನ್ನಮ್ಮ ಜಯಂತಿಯಲ್ಲಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಸದಸ್ಯ ಹನುಮಂತಪ್ಪ ಬಸರಿಗಿಡದ, ಅನ್ನು ಚಳ್ಳಮರದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.