ಗಂಗಾವತಿ: ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಈಚೆಗೆ ಗಂಗಾವತಿ ತಾಲ್ಲೂಕು ಕೃಷಿಕ ಸಮಾಜದ ಪದಾಧಿಕಾರಿಗಳು ಆಯ್ಕೆ ನಡೆಯಿತು.
ತಾಲ್ಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಅವಧಿ ಐದು ವರ್ಷಗಳಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸೇರಿ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಚುನಾವಣೆ ನಡೆಸಲು ಉಮೇದುವಾರಿಕೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಎಲ್ಲಾ ಸ್ಥಾನಗಳಿಗೂ ತಲಾ ಒಂದೊಂದು ಅರ್ಜಿ ಸಲ್ಲಿಕೆಯಾದ್ದರಿಂದ ಚನ್ನಪ್ಪ ಮಳಗಿ (ಅಧ್ಯಕ್ಷ), ರಮೇಶ್ ಕುಲಕರ್ಣಿ (ಉಪಾಧ್ಯಕ್ಷ), ಮಲ್ಲೇಶಪ್ಪ ರಾರಾವಿ (ಪ್ರಧಾನ ಕಾರ್ಯದರ್ಶಿ), ಕುಮಾರೆಪ್ಪ (ಖಜಾಂಚಿ), ಅಮರೇಶಪ್ಪ ಅವರು ಜಿಲ್ಲಾ ಪ್ರತಿನಿಧಿಯಾಗಿ ಅವಿರೋಧ ಆಯ್ಕೆಯಾದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಆದೇಶ ಪ್ರತಿಗಳನ್ನು ವಿತರಿಸಿ, ಸನ್ಮಾನಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.