ADVERTISEMENT

ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 5:12 IST
Last Updated 25 ಜನವರಿ 2023, 5:12 IST
ಕೊಪ್ಪಳ ಸಮೀಪದ ಕಿಡದಾಳದಲ್ಲಿ ಮಂಗಳವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಯಿತು
ಕೊಪ್ಪಳ ಸಮೀಪದ ಕಿಡದಾಳದಲ್ಲಿ ಮಂಗಳವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಯಿತು   

ಕೊಪ್ಪಳ: ಇಲ್ಲಿಗೆ ಸಮೀಪದ ಕಿಡದಾಳ ಗ್ರಾಮದಲ್ಲಿರುವ ಶಾರದಾ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮವು ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಖಿ ಒನ್‌ಸ್ಟಾಪ್ ಸೆಂಟರ್, ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ್ ಕಾರ್ಯಕ್ರಮ ಉದ್ಘಾಟಿಸಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಹಾಗೂ ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಅವಶ್ಯವಿರುವ ಯಾವುದೇ ರೀತಿಯ ಕಾನೂನು ನೆರವು ಅವಶ್ಯವಿದ್ದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಸ್ಕೂಲ್‌ನ ನಿರ್ದೇಶಕ ವಿಶ್ವನಾಥ ರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ, ಸಖಿ ಒನ್‌ಸ್ಟಾಟ್‌ ಸೆಂಟರ್‌ನ ಯಮುನಾ ಬೆಸ್ತರ್‌, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರತಿಭಾ ಎಂ.ಕಾಶಿಮಠ, ಪ್ರಾಂಶುಪಾಲ ಡಾ. ಚಕ್ರವರ್ತಿ, ಮಕ್ಕಳ ಸಹಾಯವಾಣಿ-1098ಯ ಶರಣಪ್ಪ ಸಿಂಗನಾಳ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.