ಪ್ರಾತಿನಿಧಿಕ ಚಿತ್ರ
ಗಂಗಾವತಿ: ನಗರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುವ ಬಾಲಕನ ವಿರುದ್ಧ ಪೊಲೀಸ್ ಸಿಬ್ಬಂದಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಂಗಳವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಬಾಲಕನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ಒಂದು ಕೋಣೆಯಲ್ಲಿ ಕೂಡಿ ಹಾಕಿದ್ದಲ್ಲದೆ, ಆತನ ಕಾಲಿನ ಮೇಲೆ ಬೂಟ್‌ಗಳನ್ನು ಇಟ್ಟಿದ್ದಾರೆ ಎಂಬ ಗಂಭೀರ ಆರೋಪದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ವಿಡಿಯೊದಲ್ಲಿ ಬಾಲಕನು ಸಹ ತನಗಾದ ತೊಂದರೆ ವಿವರಿಸಿದ್ದಾನೆ.
ವರದಿ ಆಧರಿಸಿ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಏಳು ದಿನಗಳ ಒಳಗಾಗಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಎಸ್.ಪಿ. ಅವರಿಗೆ ನಿರ್ದೇಶನ ನೀಡಿದೆ.
ಪ್ರಕರಣ ದಾಖಲು: ಬಾಲಕನನ್ನು ಸಾರ್ವಜನಿಕರಿಂದ ರಕ್ಷಣೆಮಾಡಿ ನಗರಠಾಣೆಗೆ ಕರೆತಂದು ಪೊಲೀಸ್ ಸಿಬ್ಬಂದಿ ವಿಚಾರಣೆ ಮಾಡುವಾಗ ಮಲ್ಲಿ ಎಸ್. ಮಾದಿಗ ಎಂಬ ಫೇಸಬುಕ್ ಬಳಕೆದಾರ ವಿಚಾರಣೆ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನಲೆಯಲ್ಲಿ ಆ ವ್ಯಕ್ತಿಯ ವಿರುದ್ದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.