ADVERTISEMENT

ಕಣ್ಣಿಗೆ ಕಾಣುವ ಮಕ್ಕಳೇ ದೇವರು: ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿಕೆ

ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್‌ ವಿತರಣೆ:

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 3:05 IST
Last Updated 1 ಆಗಸ್ಟ್ 2021, 3:05 IST
ಕೊಪ್ಪಳದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ ನೀಡಲಾಯಿತು
ಕೊಪ್ಪಳದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ ನೀಡಲಾಯಿತು   

ಕೊಪ್ಪಳ: ‘ಕಣ್ಣಿಗೆ ಕಾಣದ ದೇವರನ್ನು ಪೂಜಿಸುವುದಕ್ಕಿಂತ ಮಕ್ಕಳನ್ನೇ ದೇವರಂತೆಕಂಡು ಅವರ ಸೇವೆ ಮಾಡಿದಾಗ ಮಾತ್ರ ದೇವರ ಒಲುಮೆ ದೊರೆಯುತ್ತದೆ’ ಎಂದು ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮ, ತುಮಕೂರು ಜಿಲ್ಲೆಯ ಪಾವಗಡದ ವಿವೇಕಾನಂದ ಆಶ್ರಮ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಇನ್ಫೋಸಿಸ್ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇವರ ಸೇವೆ ಎಂದರೆ ಬೇರೆನೂ ಅಲ್ಲ. ಅದು ನಮ್ಮ ಮಧ್ಯೆಯೇ ಇರುವವರನ್ನು ಪ್ರೀತಿಯಿಂದ ಕಾಣುವುದು. ಅವರಿಗೆ ಸಹಾಯ ಮಾಡುವುದು. ಕಣ್ಣಿಗೆ ಕಾಣದ ದೇವರನ್ನು ಪೂಜಿಸುವುದಕ್ಕಿಂತ ಮಕ್ಕಳನ್ನೇ ದೇವರಂತೆ ಕಾಣಬೇಕು ಎಂದರು.

ADVERTISEMENT

ಅಪೌಷ್ಟಿಕ ಮಕ್ಕಳನ್ನು ಗುರುತಿಸಿ, ಜಿಲ್ಲಾಡಳಿತದ ಸಹಯೋಗದಲ್ಲಿ ಅವರನ್ನು ಪೌಷ್ಟಿಕ, ಆರೋಗ್ಯವಂತ ಮಕ್ಕಳನ್ನಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದರು. ಆಶ್ರಮದಜಪಾನಂದ ಮಹಾರಾಜ್‌ ಜೀಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ, ಕಿಟ್ ವಿತರಣೆ ಮಾಡಿ ಮಾತನಾಡಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ,‘ವೈದ್ಯಕೀಯ ಸೌಲಭ್ಯ ಹೆಚ್ಚಳ ಮಾಡುವ ದಿಸೆಯಲ್ಲಿ ಈಗಾಲೇ ವೈದ್ಯಕೀಯ ಕಾಲೇಜು, ಜಿಲ್ಲಾಸ್ಪತ್ರೆ, ತಾಯಿ ಮಕ್ಕಳ ಆಸ್ಪತ್ರೆಗಳನ್ನು ಆರಂಭಿಸಲಾಗಿದೆ. ಜಿಲ್ಲೆಗೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ’ ಎಂದರು. ಸಂಸ್ಥೆಅಧ್ಯಕ್ಷಸೋಮರಡ್ಡಿ ಅಳವಂಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಉಪನಿರ್ದೇಶಕಿ ಅಕ್ಕಮಹಾದೇವಿ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ.ಜಂಬಯ್ಯ, ರಾಯಚೂರು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಅಧ್ಯಕ್ಷ ವಿಜಯಕುಮಾರ ಪಾಟೀಲ್, ಐಆರ್‌ಸಿಸಿ ಆಡಳಿತ ಮಂಡಳಿ ನಿರ್ದೇಶಕ ಡಾ.ಶ್ರೀನಿವಾಸ ಹ್ಯಾಟಿ, ಉಪಸಭಾಪತಿ ಡಾ. ಗವಿಸಿದ್ದನಗೌಡ ಜಿ.ಪಾಟೀಲ ಇದ್ದರು.

ಡಾ.ಶಿವನಗೌಡ ನಿರೂಪಿಸಿದರು. ಡಾ.ಹ್ಯಾಟಿ ಸ್ವಾಗತಿಸಿದರು. ಶ್ರಾವಣಿ ಪಾಟೀಲ ಪ್ರಾರ್ಥಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.