ADVERTISEMENT

ಕುಷ್ಟಗಿ: ಪೌರಸೇವಾ ನೌಕರರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:47 IST
Last Updated 31 ಮೇ 2025, 14:47 IST
ಕುಷ್ಟಗಿ ಪುರಸಭೆ ಬಳಿ ಪೌರಸೇವಾ ನೌಕರರು ಬೇಡಿಕೆಗಳಿಗೆ ಒತ್ತಾಯಿಸಿ ಧರಣಿ ನಡೆಸಿದರು
ಕುಷ್ಟಗಿ ಪುರಸಭೆ ಬಳಿ ಪೌರಸೇವಾ ನೌಕರರು ಬೇಡಿಕೆಗಳಿಗೆ ಒತ್ತಾಯಿಸಿ ಧರಣಿ ನಡೆಸಿದರು   

ಕುಷ್ಟಗಿ: ವಿವಿಧ ಬೇಡಿಕೆಗಳ ಈಡೇರಿಕಗೆ ಒತ್ತಾಯಿಸಿ ಇಲ್ಲಿಯ ಪೌರಸೇವಾ ನೌಕರರು ಮತ್ತು ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ಪುರಸಭೆ ಕಚೇರಿ ಬಳಿ ಧರಣಿ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಬಹುದಿನಗಳಿಂದಲೂ ಈಡೇರದೆ ಉಳಿದಿರುವ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಹಾಗಾಗಿ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮಂಜಸವಾಗಿರುವ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದರು.

ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಅಧ್ಯಕ್ಷ ಮಹಾಂತೇಶ ಕಲಭಾವಿ ಧರಣಿಗೆ ಬೆಂಬಲ ವ್ಯಕ್ತಪಡಿಸಿದರು. 

ADVERTISEMENT

ಈ ಸಂದರ್ಭದಲ್ಲಿ ಪೌರಸೇವಾ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಪ್ಪ, ಉಪಾಧ್ಯಕ್ಷ ಚಿರಂಜೀವಿ ದೊಡ್ಡಮನಿ, ಕಾರ್ಯದರ್ಶಿ ರವಿ ಹಿರೇಮನಿ ಹಾಗೂ ಸಂಘದ ಎಲ್ಲ ಪದಾಧಿಕಾರಿಗಳು, ಸದಸ್ಯ ಇದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಪುರಸಭೆ ಸದಸ್ಯರು ಭೇಟಿ ನೀಡಿ ಬೆಂಬಲ ಸೂಚಿಸಿದರು.

ಬೇಡಿಕೆ ಈಡೇರಿಸುವ ಕುರಿತು ಸರ್ಕಾರದ ಲಿಖಿತ ಹೇಳಿಕೆ ಬರುವವರೆಗೂ ಮುಷ್ಕರ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.