ADVERTISEMENT

ಹುಲಿಹೈದರ ಗ್ರಾಮದಲ್ಲಿ: ಆರು ತಂಡ ರಚನೆ, 10 ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 16:31 IST
Last Updated 12 ಆಗಸ್ಟ್ 2022, 16:31 IST
ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದ ಘರ್ಷಣೆಯಲ್ಲಿ ನಜ್ಜುಗುಜ್ಜಾದ ಬೈಕ್‌
ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದ ಘರ್ಷಣೆಯಲ್ಲಿ ನಜ್ಜುಗುಜ್ಜಾದ ಬೈಕ್‌   

ಕನಕಗಿರಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು 10 ಜನ ಆರೋಪಿಗಳನ್ನು ಬಂಧಿಸಿದ್ದು, 15 ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

‘ವಶಪಡಿಸಿಕೊಂಡವರಲ್ಲಿ ಕೆಲವರ ನಡೆ ಅನುಮಾನಾಸ್ಪದಾಗಿದ್ದು, ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರ ಆರು ತಂಡ ರಚಿಸಲಾಗಿದೆ. ಸದ್ಯಕ್ಕೆ ಹತ್ತು ಜನರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು‘ ಎಂದು ಜಿಲ್ಲಾ ಪೊಲೀಸ್ ಅರುಣಾಂಗ್ಷು ಗಿರಿ ಪ್ರಜಾವಾಣಿಗೆ ತಿಳಿಸಿದರು.

ADVERTISEMENT

‘ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ. ನಿಜವಾದ ಆರೋಪಿಗಳನ್ನು ಮಾತ್ರ ಬಂಧಿಸಲಾಗುವುದು. ತಪ್ಪಿತಸ್ಥರು ಅಲ್ಲದವರನ್ನು ಬಿಡುಗಡೆ ಮಾಡಲಾಗುವುದು’ ಎಂದರು.

ಊರು ತೊರೆದ ಗ್ರಾಮಸ್ಥರು: ಗ್ರಾಮದಲ್ಲಿ ಶುಕ್ರವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬಂಧನದ ಭೀತಿಯಿಂದ ವೃದ್ಧರು ಮತ್ತು ಮಹಿಳೆಯರು ಹೊರತುಪಡಿಸಿ ಬಹುತೇಕ ಜನರು ಗ್ರಾಮ ತೊರೆದಿದ್ದಾರೆ. ಕೆಲ ಮಹಿಳೆಯರು ತವರು ಮನೆಗೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.