ADVERTISEMENT

ವೈಯಕ್ತಿಕ ಶುಚಿತ್ವಕ್ಕೆ ಮಹತ್ವ ನೀಡಿ: ಬಸಮ್ಮ ಹುಡೇದ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 4:52 IST
Last Updated 9 ಫೆಬ್ರುವರಿ 2022, 4:52 IST
ಅಳವಂಡಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಯಿತು
ಅಳವಂಡಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಯಿತು   

ಅಳವಂಡಿ: ‘ವೈಯಕ್ತಿಕ ಶುಚಿತ್ವಕ್ಕೆ ಮಹತ್ವ ನೀಡಿ’ ಎಂದು ಜಿಲ್ಲಾ ಪಂಚಾಯಿತಿಯ ಎಸ್‍ಬಿಎಂ ಸ್ಯಾನಿಟೇಶನ್ ಮತ್ತು ಹೈಜಿನ್ ಸಮಾಲೋಚಕಿ ಬಸಮ್ಮ ಹುಡೇದ ಸಲಹೆ ನೀಡಿದರು.

ಇಲ್ಲಿನ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಮಹಿಳಾ ಸ್ವಸಹಾಯ ಸಂಘದ ಸದಸ್ಯರ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ,‘ಗ್ರಾಮ ಪಂಚಾಯಿತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭ ವಾಗಲಿದೆ. ಎಲ್ಲರೂ ಮನೆಯಲ್ಲಿ ಹಸಿ ಮತ್ತು ಒಣ ಕಸ ಪ್ರತ್ಯೇಕಿಸಿ ಹಸಿ ಕಸವನ್ನು ಮನೆ ಹಂತದಲ್ಲಿ ನಿರ್ವಹಣೆ ಮಾಡಿ, ಒಣ ಕಸ ಸ್ವಚ್ಛ ವಾಹಿನಿಗೆ ನೀಡಬೇಕು. ಇದರಿಂದ ವಿಲೇವಾರಿ ಮಾಡಲು ಸಹಕಾರಿಯಾಗುತ್ತದೆ’ ಎಂದರು.

ಬಟ್ಟೆ ಬಳಕೆ ಮಾಡುವ ಮಹಿಳೆಯರು ಬಟ್ಟೆಯನ್ನು ಸ್ವಚ್ಛಗೊಳಿಸಿ ಬಿಸಿಲಿನಲ್ಲಿ ಒಣಗಿಸಿ ಸುರಕ್ಷಿತವಾಗಿಡುವುದು ಬಹು ಮುಖ್ಯ ಎಂದರು.

ADVERTISEMENT

ಋತುಚಕ್ರದ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು. ಪ್ರತಿಯೊಬ್ಬ ಮಹಿಳೆಯರು ಋತುಚಕ್ರದ ಸಂದರ್ಭದಲ್ಲಿ ಪ್ಯಾಡ್ ಬಳಕೆ ಮಾಡಬೇಕು ಎಂದರು.

ಪಿಡಿಒ ರುದ್ರಯ್ಯ ಹಿರೇಮಠ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಂಕ್ರಮ್ಮ ಜೋಗಿನ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಕೊಟ್ರಪ್ಪ ಅಂಗಡಿ, ಕಾರ್ಯದರ್ಶಿ ಬಸವರಾಜ, ಗ್ರಾಮ ಪಂಚಾಯಿತಿ ಡಿಇಒ ದೇವೆಂದ್ರರಡ್ಡಿ, ದಾವಲಸಾಬ ಮುಲ್ಲಾ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.