ADVERTISEMENT

ಕೊಪ್ಪಳ:ಸಿಎಂ ಆಗಮನ ಹಿನ್ನೆಲೆ ಸಿಸಿಟಿವಿ ಕಣ್ಗಾವಲು,ಅಧಿಕಾರಿಗಳಿಂದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 6:51 IST
Last Updated 6 ಅಕ್ಟೋಬರ್ 2025, 6:51 IST
ಕೊಪ್ಪಳದಲ್ಲಿ ಭಾನುವಾರ ಅಧಿಕಾರಿಗಳು ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು
ಕೊಪ್ಪಳದಲ್ಲಿ ಭಾನುವಾರ ಅಧಿಕಾರಿಗಳು ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು   

ಕೊಪ್ಪಳ: ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳಲಿರುವ ಕಾರಣ ಸುರಕ್ಷತಾ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಕಾರ್ಯಕ್ರಮ ನಡೆಯಲಿದ್ದು, ಮುಖ್ಯವೇದಿಕೆಯು ಕೇಸರಿ, ಬಿಳಿ, ಹಸಿರು ಧ್ವಜದ ಬಣ್ಣದ ಬಟ್ಟೆಯಿಂದ ಅಲಂಕೃತಗೊಂಡಿದೆ. ಮುಖ್ಯ ಹಾಗೂ ಸಮಾನಾಂತರ ಮೂರೂ ಬೃಹತ್‌ ವೇದಿಕೆಗಳ ಬಳಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.  ವಿಜಯನಗರ, ರಾಯಚೂರು, ಬಳ್ಳಾರಿ, ಯಾದಗಿರಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಬೃಹತ್ ಪ್ರಮಾಣದಲ್ಲಿ ಕೃಷಿ, ತೋಟಗಾರಿಕಾ, ಇನ್ನಿತರ ಸಲಕರಣೆಗಳು ಮತ್ತು ಯಂತ್ರಗಳನ್ನು ವೇದಿಕೆಯ ಪಕ್ಕದಲ್ಲಿ ಇಡಲಾಗಿದ್ದು, ಈ ಸವಲತ್ತು ವಿತರಣೆಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್‌ ನೇಗಿ, ಎಸ್‌.ಪಿ. ಡಾ. ರಾಮ್‌ ಎಲ್‌. ಅರಸಿದ್ಧಿ ಅವರು ವೇದಿಕೆ ಹಾಗೂ ಇನ್ನಿತರ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.