ADVERTISEMENT

₹1 ಕೋಟಿ ಕೃಷಿ ಸಾಲ ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 3:51 IST
Last Updated 14 ನವೆಂಬರ್ 2020, 3:51 IST
ಕನಕಗಿರಿ ಸಮೀಪದ ನವಲಿ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘಕ್ಕೆ ಸಾಲ ನೀಡುವಂತೆ ಒತ್ತಾಯಿಸಿ ರಾಯಚೂರು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ ಅವರಿಗೆ ಸಂಘದ ಪದಾಧಿಕಾರಿಗಳು ಭಾನುವಾರ ಮನವಿ ಪತ್ರ ಸಲ್ಲಿಸಿದರು
ಕನಕಗಿರಿ ಸಮೀಪದ ನವಲಿ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘಕ್ಕೆ ಸಾಲ ನೀಡುವಂತೆ ಒತ್ತಾಯಿಸಿ ರಾಯಚೂರು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ ಅವರಿಗೆ ಸಂಘದ ಪದಾಧಿಕಾರಿಗಳು ಭಾನುವಾರ ಮನವಿ ಪತ್ರ ಸಲ್ಲಿಸಿದರು   

ಕನಕಗಿರಿ: ಸಮೀಪದ ನವಲಿ ಗ್ರಾಮದ ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ₹1 ಕೋಟಿ ಸಾಲ ನೀಡುವಂತೆ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪುರ ಅವರು ಒತ್ತಾಯಿಸಿದ್ದಾರೆ.

ರಾಯಚೂರು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ ಅವರನ್ನು ಭಾನುವಾರ ಭೇಟಿಯಾಗಿ ಈ ಮನವಿ ಸಲ್ಲಿಸಿದ್ದಾರೆ.

ಹಿಂಗಾರು ಬೆಳೆ ಬೆಳೆಯಲು ಹಾಗೂ ಹಳೆಯ ಸಾಲಗಾರರಿಗೆ ಹೆಚ್ಚುವರಿ ಸಾಲ ನೀಡಲು ಸಂಘಕ್ಕೆ ಸಾಲದ ಅವಶ್ಯಕತೆ ಇದೆ. ಕಳೆದ ಹತ್ತು ವರ್ಷಗಳಿಂದಲೂ ಒಬ್ಬ ರೈತರಿಗೆ ಬರೀ ₹30 ಸಾವಿರ ಕೃಷಿ ಸಾಲ ನೀಡಲಾಗಿದೆ. ಸ್ಕೇಲ್ ಆಫ್ ಫೈನಾನ್ಸ್ ಪ್ರಕಾರ ಹೆಚ್ಚುವರಿ ಸಾಲದ ಅವಶ್ಯಕತೆ ಇದೆ" ಎಂದು ಮನವಿಯಲ್ಲಿ ಗಮನ
ಸೆಳೆದಿದ್ದಾರೆ.

ADVERTISEMENT

ಸಂಘದ ಉಪಾಧ್ಯಕ್ಷ ಚಂದ್ರಪ್ಪ ಹಿರೇಕುರುಬರ, ಜಡಿಯಪ್ಪ ಆದಾಪುರ, ನಿಂಗಪ್ಪ ನಾಯಕ, ಶಂಕರಗೌಡ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾಗೇಶ ಗುಂಡದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.