ADVERTISEMENT

ವಿದ್ಯಾರ್ಥಿ ಒಕ್ಕೂಟದಿಂದ 17ರಂದು ಕಾಲೇಜು ಬಂದ್‌

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2022, 8:43 IST
Last Updated 13 ಡಿಸೆಂಬರ್ 2022, 8:43 IST

ಕೊಪ್ಪಳ: ‘ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಡಿ.17ರಂದುರಾಜ್ಯದಾದ್ಯಂತ ಪದವಿ ಕಾಲೇಜುಗಳ ಬಂದ್‌ಗೆ ಕರೆ ನೀಡಲಾಗಿದೆ’ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯು) ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ತೆಕ್ಕಲಕೋಟೆ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ವಿಳಂಬವಾಗಿರುವ ಪರೀಕ್ಷಾ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕು. ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪರೀಕ್ಷೆ ನಡೆಸಿ 7 ತಿಂಗಳಾದರೂ ಫಲಿತಾಂಶ ಬಂದಿಲ್ಲ. ಸರಿಯಾಗಿ ಸ್ಕಾಲರ್‌ಷಿಪ್‌ ನೀಡಬೇಕು, ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸೌಲಭ್ಯದ ಸಮಸ್ಯೆಗೆ ಪರಿಹಾರ ನೀಡಬೇಕು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಹೆಚ್ಚಿಸಿರುವ ಶುಲ್ಕ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.

’ಅಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾರ್ಥಿಗಳ ಮನವೊಲಿಸಿ ಕಾಲೇಜುಗಳನ್ನು ಬಂದ್‌ ಮಾಡಿಸಲಾಗುವುದು. ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್‌ ನೀಡಬೇಕು’ ಎಂದು ಒತ್ತಾಯಿಸಿ ಹೋರಾಟ ಮಾಡಲಾಗುವುದು ಎಂದರು.

ADVERTISEMENT

ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಶಬೆಣ್ಣಿ ಗುಡದಳ್ಳಿ, ಉಪಾಧ್ಯಕ್ಷ ಫಕೀರೇಶ್ ಬಾರಕೇರ, ಕಾರ್ಯದರ್ಶಿ ಜ್ಯೋತಿ ಗೊಂಡಬಾಳ ಹಾಗೂ ಸದಸ್ಯ ಲಕ್ಷ್ಮಣ ಆಚಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.