ADVERTISEMENT

ಕಾಡಾ ಅಧ್ಯಕ್ಷರಾಗಿ ತಿಪ್ಪೇರುದ್ರಸ್ವಾಮಿ ನೇಮಕ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 12:00 IST
Last Updated 25 ನವೆಂಬರ್ 2020, 12:00 IST
 ಬಿ.ಎಚ್.ಎಂ ತಿಪ್ಪೇರುದ್ರಸ್ವಾಮಿ
ಬಿ.ಎಚ್.ಎಂ ತಿಪ್ಪೇರುದ್ರಸ್ವಾಮಿ   

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದ ರೈತ ಮುಖಂಡ ಹಾಗೂ ವಕೀಲರಾದ ಬಿ.ಎಚ್.ಎಂ ತಿಪ್ಪೇರುದ್ರಸ್ವಾಮಿ ಅವರು ತುಂಗಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ನೂತನ ಅಧ್ಯಕ್ಷರಾಗಿ ಬುಧವಾರ ನೇಮಕಗೊಂಡಿದ್ದಾರೆ.

ಕಳೆದ ಮೂವತ್ತು ವರ್ಷಗಳಿಂದ ರೈತಪರ ಹೋರಾಟಗಳನ್ನು ಮಾಡುತ್ತಾ, ತ್ರಿವಳಿ ಜಿಲ್ಲೆಗಳಾದ ಬಳ್ಳಾರಿ, ಕೊಪ್ಪಳ, ರಾಯಚೂರು ಭಾಗದ ರೈತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಗುರುತಿಸಿಕೊಂಡಿದ್ದರು. ಜೊತೆಗೆ ಬಿಜೆಪಿ ಪಕ್ಷದಲ್ಲೂ ಸಕ್ರೀಯವಾಗಿ ತೊಡಗಿದ್ದ ಅವರನ್ನು ಹೈಕಮಾಂಡ್ ಗುರುತಿಸಿ ಕಾಡಾ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇಮಕ ಮಾಡಿದ್ದಾರೆ.
ಆರಂಭದಲ್ಲಿ ಆರ್ ಎಸ್ ಎಸ್ ಮೂಲಕ ಗುರುತಿಸಿಕೊಂಡು ಎಬಿವಿಪಿ ನಾಯಕರಾಗಿ ಬಿಜೆಪಿ ಮೂಲಕ ರಾಜಕೀಯಕ್ಕೆ ಬಂದಿದ್ದರು.

ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಅವರು, ಎಪಿಎಂಸಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ADVERTISEMENT

ಅದಕ್ಕೂ ಮುನ್ನ ರೈತ ಸಂಘದಿಂದ ಕನಕಗಿರಿ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಇದೀಗ ಅವರ ಸೇವೆಯನ್ನು ಗುರುತಿಸಿ ಬಿಜೆಪಿ ಹೈಕಮಾಂಡ್ ತುಂಗಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.