ADVERTISEMENT

ಕಾರ್ಮಿಕರಿಗೆ ಪರಿಹಾರ: ನೋಂದಣಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 11:18 IST
Last Updated 6 ಜೂನ್ 2021, 11:18 IST

ಗಂಗಾವತಿ: ಕೋವಿಡ್ 2ನೇ ಅಲೆಯ ಕಾರಣ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಪರಿಹಾರ ಘೋಷಿಸಿದೆ. ಸೇವಾಸಿಂಧು ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಸರ್ಕಾರ ಒಟ್ಟು 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ತಲಾ ₹2 ಸಾವಿರದಂತೆ ಒಂದು ಬಾರಿ ಸಹಾಯ ಧನ ನೀಡಲು ತಿಳಿಸಿದೆ ಎಂದು ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರಸಭೆಯ ಹಳೆ ಕಚೇರಿ ಪ್ರಾಂಗಣ, ಚೌಡಿ ಹಾಗೂ ನಗರದ ವಿವಿಧ ಪ್ರದೇಶಗಳಲ್ಲಿ 19 ಸೇವಾ ಸಿಂಧು ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌, ಮೆಕಾನಿಕ್‌, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಬಟ್ಟೆ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.