ADVERTISEMENT

ಆಧಾರ್-ಇಪಿಐಸಿ ಜೋಡಣೆ ಪೂರ್ಣಗೊಳಿಸಿ: ಸುಂದರೇಶ ಬಾಬು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 15:29 IST
Last Updated 23 ಸೆಪ್ಟೆಂಬರ್ 2022, 15:29 IST
ಕೊಪ್ಪಳದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು
ಕೊಪ್ಪಳದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು   

ಕೊಪ್ಪಳ: ಬಾಕಿ ಉಳಿದ ಮತದಾರರ ಆಧಾರ್-ಇಪಿಐಸಿ ಜೋಡಣೆ ಬೇಗನೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮತ್ತು ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ಬಗ್ಗೆ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಶುಕ್ರವಾರ ನಡೆದ ವಿಡಿಯೊ ಕಾನ್ಸರೆನ್ಸ್‌ ಸಭೆಯಲ್ಲಿ ಮಾತನಾಡಿದ ಅವರು ‘ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಗುರುತಿನ ಚೀಟಿಗೆ ಆಧಾರ ಜೋಡಣೆ ಕಾರ್ಯದಲ್ಲಿ ಜಿಲ್ಲೆಯ ಒಟ್ಟು 11,05,345 ಮತದಾರರ ಪೈಕಿ 8,40,517 (ಶೇ.76.04) ಮತದಾರರ ಆಧಾರ್-ಇಪಿಐಸಿ ಜೋಡಣೆಯಾಗಿದೆ. ಉಳಿದವರ ಜೋಡಣೆ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ‘ಮೂಲ ಸೌಕರ್ಯಗಳ ಹಾನಿಯ ವಿವರದಂತೆ ಪಂಚಾಯತ್ ರಾಜ್ ಇಲಾಖೆಗೆ ಸೇರಿದ ಅಂದಾಜು ₹226.05 ಲಕ್ಷದ 21 ಕಿ.ಮೀ ರಸ್ತೆ ಮತ್ತು ಅಂದಾಜು ಮೊತ್ತ ₹123.50 ಲಕ್ಷದ 11 ಸೇತುವೆಗಳು ಹಾನಿಯಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.