ADVERTISEMENT

ಶಿವರಾಜ ತಂಗಡಗಿಗೆ ಕೋವಿಡ್‌ ಸೋಂಕು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 3:07 IST
Last Updated 20 ಏಪ್ರಿಲ್ 2021, 3:07 IST
ಶಿವರಾಜ ತಂಗಡಗಿ
ಶಿವರಾಜ ತಂಗಡಗಿ   

ಕಾರಟಗಿ: ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ಅವರಿಗೆ ಸೋಮವಾರ ಕೋವಿಡ್‌ ಸೋಂಕು ದೃಢಪಟ್ಟಿದೆ.

ಅವರು ಮಸ್ಕಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಭಾನುವಾರ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಆದ್ದರಿಂದ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು.

ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ವಾರಂಟೈನ್‌ನಲ್ಲಿರಬೇಕು ಎಂದು ಶಿವರಾಜ ತಂಗಡಗಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.