ADVERTISEMENT

‘ಬೆಲೆ ಹೆಚ್ಚಳದಿಂದ ಜನರಿಗೆ ಸಂಕಷ್ಟ’

ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 4:55 IST
Last Updated 15 ಜೂನ್ 2021, 4:55 IST
ಯಲಬುರ್ಗಾ ಪಟ್ಟಣದ ಹೊರವಲಯದಲ್ಲಿರುವ ಪೆಟ್ರೋಲ್ ಬಂಕ್ ಎದುರು ಮಹಿಳಾ ಕಾಂಗ್ರೆಸ್ ಮುಖಂಡರು ಸರ್ಕಾರದ ವಿರುದ್ಧ ಪ್ರತಿಭಟಿಸಿದರು
ಯಲಬುರ್ಗಾ ಪಟ್ಟಣದ ಹೊರವಲಯದಲ್ಲಿರುವ ಪೆಟ್ರೋಲ್ ಬಂಕ್ ಎದುರು ಮಹಿಳಾ ಕಾಂಗ್ರೆಸ್ ಮುಖಂಡರು ಸರ್ಕಾರದ ವಿರುದ್ಧ ಪ್ರತಿಭಟಿಸಿದರು   

ಯಲಬುರ್ಗಾ: ‘ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆಯಾಗಿದೆ. ಇದಕ್ಕೆ ಕಾರಣವಾಗಿರುವ ಕೇಂದ್ರ ಸರ್ಕಾರದ ಧೋರಣೆ ಜನ ವಿರೋಧಿಯಾಗಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಜಯಶ್ರೀ ಕಂದಕೂರು ಆರೋಪಿಸಿದರು.

ಪಟ್ಟಣದ ಕುದ್ರಿಕೊಟಗಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಅಡುಗೆ ಅನಿಲದ ದರವೂ ಹೆಚ್ಚಾಗಿದೆ. ಜನ ಸಾಮಾನ್ಯರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಕೋವಿಡ್ ಪರಿಸ್ಥಿತಿಯಲ್ಲಿ ದರ ಕಡಿಮೆ ಮಾಡುವುದನ್ನು ಬಿಟ್ಟು ಹೆಚ್ಚಿಸುತ್ತಿರುವುದು ಜನರಿಗೆ ಮಾಡುತ್ತಿರುವ ದ್ರೋಹ ಎಂದು ಟೀಕಿಸಿದರು.

ADVERTISEMENT

ಜಿ.ಪಂ. ಸದಸ್ಯರಾದ ಗಿರಿಜಾ ಸಂಗಟಿ, ಹೊಳೆಯಮ್ಮ ಪೋಲಿಸ್ ಪಾಟೀಲ, ತಾ.ಪಂ. ಸದಸ್ಯೆ ಸಾವಿತ್ರಿ ಗೊಲ್ಲರ, ಪ.ಪಂ. ಸದಸ್ಯೆ ಡಾ.ನಂದಿತಾ ದಾನರೆಡ್ಡಿ, ಮಾಜಿ ಸದಸ್ಯರಾದ ಶರಣಮ್ಮ ಪೂಜಾರ ಹಾಗೂ ಮಹಿಳಾ ಘಟಕದ ಸದಸ್ಯೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.