ADVERTISEMENT

‘ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು’

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 13:16 IST
Last Updated 5 ಏಪ್ರಿಲ್ 2021, 13:16 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ತಾವರಗೇರಾ: ‘ಬೆಳಗಾವಿ ಲೋಕಸಭಾ ಕ್ಷೇತ್ರ ಸೇರಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದುವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಹೊರವಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಸಿ.ಡಿ ಪ್ರಕರಣ ಹಾಗೂ ಯುವತಿಯ ಕುರಿತು ನಾನು ಮಾತನಾಡುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕೆ‍ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಸ್ಕಿ ಕ್ಷೇತ್ರದ ಚುನಾವಣೆ ಉಸ್ತುವಾರಿ ಧ್ರುವನಾರಾಯಣ, ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಎಸ್‌.ಆರ್‌.ಪಾಟೀಲ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಕೆಪಿಸಿಸಿ ಜಿಲ್ಲಾ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ, ಮಾಜಿ ಶಾಸಕರಾದ ಬಸವರಾಜ ಹಿಟ್ನಾಳ, ಹಂಪನಗೌಡ ಬಾದರ್ಲಿ ಹಾಗೂ ಹಸನಸಾಬ ದೋಟಿಹಾಳ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.