ADVERTISEMENT

ಕನಕಗಿರಿ: ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2021, 11:10 IST
Last Updated 13 ಜೂನ್ 2021, 11:10 IST
ಕನಕಗಿರಿ ಸಮೀಪದ ಹುಲಿಹೈದರ ಗ್ರಾಮದ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್  ಕಾರ್ಯಕರ್ತರು  ಭಾನುವಾರ ಪ್ರತಿಭಟನೆ ನಡೆಸಿದರು
ಕನಕಗಿರಿ ಸಮೀಪದ ಹುಲಿಹೈದರ ಗ್ರಾಮದ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್  ಕಾರ್ಯಕರ್ತರು  ಭಾನುವಾರ ಪ್ರತಿಭಟನೆ ನಡೆಸಿದರು   

ಕನಕಗಿರಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ವಿದ್ಯುತ್ ದರ ಏರಿಕೆ ವಿರೋಧಿಸಿ ಪಟ್ಟಣ ಸೇರಿದಂತೆ ತಾಲ್ಲೂಕಿನ ಹುಲಿಹೈದರ, ನವಲಿ ಗ್ರಾಮಗಳ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.

ಹುಲಿಹೈದರದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ ಮಾತನಾಡಿ,‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರು, ಕಾರ್ಮಿಕ ವಿರೋಧಿ ಸರ್ಕಾರವಾಗಿದೆ’ ಎಂದು ಟೀಕಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಹೊಸ್ಗೇರ (ಹಿರೇಖೇಡ) , ಸಾವಿತ್ರಿ ಲಕ್ಷ್ಮಣ ( ಗೌರಿಪುರ), ಸದಸ್ಯರಾದ ರಾಜಸಾಬ, ಬೇಗ್ಂ ಶಾಮೀದಸಾಬ ಕನಕಗಿರಿ, ರೇಣಮ್ಮ ಹರಿಜನ, ಪ್ರಮುಖರಾದ ಗೋಸ್ಲೆಪ್ಪ ಗದ್ದಿ, ಈಶಪ್ಪ ಹೊಸ್ಗೇರ, ಬೆಟ್ಟಪ್ಪ ಜೀರಾಳ, ಹನುಮಂತಪ್ಪ ಜಾಡಿ, ನಾಗಪ್ಪ ಬಸರಿಹಾಳ ಹಾಗೂ ಶೇಖರಗೌಡ ಪಾಟೀಲ ಇತರರು ಇದ್ದರು.

ADVERTISEMENT

ಸಮೀಪದ ನವಲಿ ಗ್ರಾಮದ ಪೆಟ್ರೋಲ್ ಬಂಕ್ ಮುಂದೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಪೃಥ್ವಿರಾಜ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರಗತಿಪರ ಚಿಂತಕ ಲಿಂಗರಾಜ ಹೂಗಾರ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಿಂದ ಟೀಕಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಪ್ರಜ್ವಲರಾಮ್, ಜಡಿಯಪ್ಪ ಭೋವಿ ಸೇರಿದಂತೆ ವಿವಿಧ ಗ್ರಾಮಸ್ಥರು ಭಾಗವಹಿಸಿದ್ದರು.

ಚಿಕ್ಕಮಾದಿನಾಳ ಹೋಬಳಿ ವ್ಯಾಪ್ತಿಯ ಕಾರ್ಯಕರ್ತರು ಕೊಪ್ಪಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.

ಹಾಲುಮತ ಸಮಾಜದ ಹಿರಿಯ ಮುಖಂಡ ಸಿದ್ದಪ್ಪ ನೀರ್ಲೂಟಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಸಂತಗೌಡ ಪಾಟೀಲ ಮಾತನಾಡಿ ಸರ್ಕಾರದ ಕಾರ್ಯ ವೈಖರಿಯನ್ನು ಟೀಕಿಸಿದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.