
ಕೊಪ್ಪಳ: ‘ಸಂವಿಧಾನವು ಪ್ರಜಾಪ್ರಭುತ್ವದ ಆತ್ಮವಾಗಿದ್ದು, ನಾವೆಲ್ಲರೂ ಅದರ ಮೌಲ್ಯಗಳನ್ನು ಅರಿತುಕೊಂಡು ದೇಶದ ಅಭಿವೃದ್ಧಿಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.
ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಸೇರಿ ಅನೇಕರು ಪಾಲ್ಗೊಂಡಿದ್ದರು.
ತಾಲ್ಲೂಕು ಪಂಚಾಯಿತಿ
ಕೊಪ್ಪಳ: ‘ದೇಶದ ಸಂವಿಧಾನದಲ್ಲಿರುವ ಆಶಯಗಳನ್ನು ಈಡೇರಿಸುವಲ್ಲಿ ಪ್ರತಿಯೊಬ್ಬ ಭಾರತೀಯ ಶ್ರಮಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಹೇಳಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸೋಮವಾರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ಮಾನ್ವಿ ಪಾಶಾ, ಪರಶುರಾಮ ಕೊರವರ, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ಸಹಾಯಕ ನಿರ್ದೇಶಕ (ಪಂ.ರಾಜ್) ಮಹೇಶ್, ತಾಲ್ಲೂಕು ಯೋಜನಾಧಿಕಾರಿ ರಾಜೇಸಾಬ ನದಾಫ್, ನರೇಗಾ ಸಹಾಯಕ ನಿರ್ದೇಶಕಿ ಸೌಮ್ಯ.ಕೆ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.