
ಹನುಮಸಾಗರದಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಕ್ರೀಡಾಕೂಟವನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್.ಪಾಟೀಲ ಉದ್ಘಾಟಿಸಿದರು.
ಹನುಮಸಾಗರ: ‘ನಿರಂತರ ಪ್ರಯತ್ನದಿಂದ ಕ್ರೀಡೆಯಲ್ಲಿ ಸಾಧನೆ ಸಾಧ್ಯ’ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಎಚ್. ಪಾಟೀಲ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಭಾನುವಾರ ನಡೆದ ಪಿಯು ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಜಂಪ್‌ರೋಪ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸಬೇಕು. ದೈಹಿಕವಾಗಿ ಸದೃಢವಾಗಿ ಬೆಳೆಯಲು ಹಾಗೂ ಮಾನಸಿಕ ಒತ್ತಡ ಕಡಿಮೆ ಮಾಡಲು ಜಂಪ್ ರೋಪ್ ಕ್ರೀಡೆ ತುಂಬಾ ಸಹಕಾರಿಯಾಗಿದೆ ಎಂದರು.
‘ಹನುಮಸಾಗರವನ್ನು ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ವಿದ್ಯಾರ್ಥಿಗಳಿಗೆ ಪದವಿ ಕಾಲೇಜಿನ ಅವಶ್ಯಕತೆ ಇದ್ದು, ಈ ಕುರಿತು ಗಮನಹರಿಸಲಾಗುವುದು’ ಎಂದರು.
ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ ಜಿ.ಎಚ್. ಮಾತನಾಡಿ, ‘ಜಂಪ್ ರೋಪ್ ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿ. ನಿರ್ಣಾಯಕರು ಪ್ರಾಮಾಣಿಕವಾಗಿ ಆಟ ಆಡಿಸಬೇಕು. ಅಂದಾಗ ಮಾತ್ರ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಲು ಸಾಧ್ಯ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ, ಪ್ರಾಚಾರ್ಯ ಭೀಮಪ್ಪ ಗೊಲ್ಲರ, ಅನಿಲ ಸಂಗಮ, ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಗ್ರಾಪಂ ಉಪಾಧ್ಯಕ್ಷೆ ಗೌರಮ್ಮ ವಾಲ್ಮೀಕಿ, ಜಂಪ್ ರೋಪ್ ಸಂಸ್ಥೆಯ ಅಬ್ದುಲ್ ಕರೀಂ ವಂಟೆಳಿ, ಅಬ್ದುಲ್ ರಜಾಕ ಟೇಲರ್, ಮುಖಂಡ ಬಸವರಾಜ ಹಳ್ಳೂರ, ಸೂಚಪ್ಪ ದೇವರಮನಿ, ಶರಣು ಹವಾಲ್ದಾರ, ಸಿದ್ದಯ್ಯ ಬಾಳಿಹಳ್ಳಿಮಠ, ವಿಶ್ವನಾಥ ಕನ್ನೂರ, ನಾಗರಾಜ ಹಕ್ಕಿ, ಶಿವಪ್ಪ ಕಂಪ್ಲಿ, ಶ್ರೀಶೈಲ ಮೊಟಗಿ, ಭವಾನಸಾ ಪಾಟೀಲ, ವಿಶ್ವನಾಥ ನಾಗೂರು, ವಿಜಯಮಹಾಂತೇಶ ಕುಷ್ಟಗಿ, ಚಂದ್ರು ಹಿರೇಮನಿ, ಸೋಮಪ್ಪ ಹೊಸಮನಿ, ಚಂದ್ರು ಬೆಳಗಲ್, ಮೌಲಾಲಿ ಮೋಟಗಿ ಇದ್ದರು.
ಬೆಂಗಳೂರು ನಗರ, ಮಂಡ್ಯ, ದಕ್ಷಿಣ ಕನ್ನಡ, ಮೈಸೂರು, ದಾವಣಗೆರೆ, ಕೊಪ್ಪಳ, ರಾಮನಗರ, ವಿಜಯಪುರ, ಬೆಳಗಾವಿ, ಉಡುಪಿ, ಧಾರವಾಡ, ಗದಗ, ಬಾಗಲಕೋಟೆ, ಹಾವೇರಿ, ಚಿಕ್ಕಮಂಗಳೂರು ಜಿಲ್ಲೆಗಳ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.