ADVERTISEMENT

ಯಲಬುರ್ಗಾ | ‘ಮದ್ಯ ಅಕ್ರಮ ಮಾರಾಟ ನಿಯಂತ್ರಿಸಿ’

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 7:35 IST
Last Updated 2 ಆಗಸ್ಟ್ 2025, 7:35 IST
ಯಲಬುರ್ಗಾ ತಾಲ್ಲೂಕಿನ ಬೇವೂರು ಠಾಣೆಯ ವ್ಯಾಪ್ತಿಗೆ ಒಳಪಡುವ ವಟಪರವಿ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟವನ್ನು ನಿಯಂತ್ರಿಸುವಂತೆ ಆಗ್ರಹಿಸಿ ವಟಪರವಿ ಗ್ರಾಮಸ್ಥರು ಪೊಲೀಸ್ ಅಧಿಕಾರಿಗೆ ದೂರು ನೀಡಿದರು
ಯಲಬುರ್ಗಾ ತಾಲ್ಲೂಕಿನ ಬೇವೂರು ಠಾಣೆಯ ವ್ಯಾಪ್ತಿಗೆ ಒಳಪಡುವ ವಟಪರವಿ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟವನ್ನು ನಿಯಂತ್ರಿಸುವಂತೆ ಆಗ್ರಹಿಸಿ ವಟಪರವಿ ಗ್ರಾಮಸ್ಥರು ಪೊಲೀಸ್ ಅಧಿಕಾರಿಗೆ ದೂರು ನೀಡಿದರು   

ಯಲಬುರ್ಗಾ: ತಾಲ್ಲೂಕಿನ ಬೇವೂರು ಠಾಣೆ ವ್ಯಾಪ್ತಿಯ ವಟಪವರಿ ಗ್ರಾಮದದಲ್ಲಿ ವಿಪರೀತ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಕೂಡಲೇ ನಿಯಂತ್ರಣಗೊಳಿಸಿ ಹಾಳಾಗುತ್ತಿರುವ ಯುವಕರು ಮತ್ತು ಕುಟುಂಬಗಳನ್ನು ಸಂರಕ್ಷಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಠಾಣೆಯ ಅಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಗ್ರಾಮಸ್ಥರು ಸುಮಾರು ಒಂದುವರೆ ವರ್ಷದಿಂದಲೂ ದಿನದಿಂದ ದಿನಕ್ಕೆ ಮದ್ಯ ವ್ಯಸನೀಗಳು ಹೆಚ್ಚಾಗುತ್ತಿದ್ದಾರೆ. ಗ್ರಾಮದಲ್ಲಿ ಸುಮಾರು 6-7ಕಡೆ ಸಾಕಷ್ಟು ಸಂಖ್ಯೆಯ ಮದ್ಯದ ಬಾಟಲಿಗಳನ್ನು ಸಂಗ್ರಹಿಸಿ ಯಾವುದೇ ಭಯ ಮತ್ತು ಅಂಚಿಕೆಯಿಲ್ಲದೇ ಮಾರಾಟ ಮಾಡುತ್ತಿದ್ದಾರೆ. ಮಳೆಯರುವ ನೆಮ್ಮದಿಂದ ಇರಲು ಸಾಧ್ಯವಾಗುತ್ತಿಲ್ಲ, ಯುವಕರು ಹಾಗೂ ವಯಸ್ಸಾದವರು ಕೂಡಾ ಮದ್ಯ ಸೇವಿಸಿ ರಸ್ತೆಯಲ್ಲಿ ಅವಾಚ್ಯಪದಗಳಿಂದ ಜನಸಾಮಾನ್ಯರನ್ನು ಬೈದಾಡುತ್ತಿದ್ದಾರೆ. ಅನೇಕ ಕುಟುಂಬಗಳು ಬೀದಿಗೆ ಬಂದಿವೆ.

ಕಾರಣ ಅಕ್ರಮವಾಗಿ ಮಾರಾಟ ಮಾಡುವುದನ್ನು ನಿಯಂತ್ರಿಸಬೇಕಾಗಿದೆ. ಸಂಬಂಧಪಟ್ಟ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸಾಕಷ್ಟು ಸಲ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಕಾರಣ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಗ್ರಾಪಂ ಅಧ್ಯಕ್ಷ ಮಂಜುನಾಥ ನಕ್ಲರ, ದುರಗಪ್ಪ ನೂತಲಗಂಟಿ, ದುರಗಪ್ಪ, ಶೇಖರಪ್ಪ ಕೊಳಜಿ, ಶರಣಪ್ಪ ಟನಕನಕಲ್ಲ,ಭೀಮಪ್ಪ, ವೆಂಕಟೇಶ ಹನಮಂತಪ್ಪ ಬಡಿಗೇರ ಸೇರಿ ಅನೇಕರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.