ADVERTISEMENT

‘ಕೋವಿಡ್ ನಿಯಮಗಳನ್ನು ಪಾಲಿಸಿ’

ರಾಯರಡ್ಡಿ ಅಭಿಮಾನಿ ಬಳಗದಿಂದ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 9 ಮೇ 2021, 6:48 IST
Last Updated 9 ಮೇ 2021, 6:48 IST
ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮದಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಅಭಿಮಾನಿ ಬಳಗದ ವತಿಯಿಂದ ಕೋವಿಡ್ ಸೋಂಕಿತ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಲಾಯಿತು
ಕುಕನೂರು ತಾಲ್ಲೂಕಿನ ಬಿನ್ನಾಳ ಗ್ರಾಮದಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಅಭಿಮಾನಿ ಬಳಗದ ವತಿಯಿಂದ ಕೋವಿಡ್ ಸೋಂಕಿತ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಲಾಯಿತು   

ಬಿನ್ನಾಳ (ಕುಕನೂರು): ‘ನಿಯಮಗಳನ್ನು ಪಾಲಿಸಿದರೆ ಕೊರೊನಾವನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಸುಭಾಷ ಮಾದಿನೂರು ಹೇಳಿದರು.

ತಾಲ್ಲೂಕಿನ ಬಿನ್ನಾಳ ಗ್ರಾಮದಲ್ಲಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ಅಭಿಮಾನಿ ಬಳಗದ ವತಿಯಿಂದ ಕೋವಿಡ್ ಸೋಂಕಿತರ ಕುಟುಂಬಗಳಿಗೆ ಶನಿವಾರ ಆಹಾರ ಧಾನ್ಯಗಳ ಕಿಟ್ ವಿತರಿಸಿ ಅವರು ಮಾತನಾಡಿದರು.

ಸಭೆ, ಸಮಾರಂಭ, ಕಾರ್ಯಕ್ರಮಗಳಿಗಿಂತ ಬದುಕು ಮತ್ತು ಆರೋಗ್ಯ ಮುಖ್ಯ. ನಮ್ಮ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿವಹಿಸಬೇಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶಗಳಲ್ಲೂ ಹರಡುತ್ತಿದೆ. ಇದಕ್ಕೆ ಲಸಿಕೆ ಹಾಕಿಸಿಕೊಳ್ಳುವುದು, ಕೊರೊನಾ ನಿಯಮ ಪಾಲನೆ ಮಾಡುವುದೊಂದೇ ಪರಿಹಾರ ಎಂದು ಅವರು ಹೇಳಿದರು.

ADVERTISEMENT

ಗ್ರಾಮ ಪಂಚಾಯಿತಿ ಸದಸ್ಯ ಗುರಪ್ಪ ಪಂತರ್ ಮಾತನಾಡಿ,‘ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಹಲವು ಕಠಿಣ ನಿಯಮ ಜಾರಿಗೊಳಿಸಿದೆ. ಕಡ್ಡಾಯವಾಗಿ ಅದನ್ನು ಪಾಲಿಸಬೇಕು. ಗ್ರಾಮ ಪಂಚಾಯಿತಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಬಾಗಿಲಿಗೆ ಬಂದು ಮಾಹಿತಿ ನೀಡುತ್ತಾರೆ. ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಅದನ್ನು ಪಾಲಿಸಬೇಕು’ ಎಂದು ಮನವಿ ಮಾಡಿದರು.

ಮಾಬುಸಾಬ ಕಡೇಮನಿ, ಶಿವಣ್ಣ ಕಂಬಳಿ, ಚೆನ್ನಪ್ಪ ಚೆಟ್ಟಿ, ಅಶೋಕ ಆಡೂರು, ಈರಪ್ಪ ಮುತ್ತಾಳ, ಶಿವಾನಂದಪ್ಪ ಸಾದರ, ಪರಮೇಶ್ವರಪ್ಪ ಹನಸಿ, ಲಕ್ಷ್ಮಣ್ಣ ಚಲವಾದಿ, ಸಂತೋಷ ಮೆಣಸಿನಕಾಯಿ, ಬಸವರಾಜ್ ಮೆಣಸಿನಕಾಯಿ ಹಾಗೂ ಬಸವರಾಜ ಭಜಂತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.