ಕೊಪ್ಪಳ: ಇಲ್ಲಿನ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಜಿಲ್ಲೆಯ ಕನಕಗಿರಿ ಕನಕಾಚಲಪತಿ ರಥೋತ್ಸವ ಮಾ.16ರಂದು ನಡೆಯಲಿದ್ದು, ಕೋವಿಡ್-19 ವೈರಸ್ ಭೀತಿ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ
ಜಾತ್ರೆಗೆ ಬರುವ ಭಕ್ತರ ಆರೋಗ್ಯ ದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಈಚೆಗೆ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ ವೈರಸ್ ಭೀತಿ ವೇಗವಾಗಿ ಹರಡುತ್ತಿರುವುದರಿಂದ ಆತಂಕಗೊಂಡ ಸಂಘಟಕರು ರದ್ದು ಮಾಡುವ ಚಿಂತನೆಯಲ್ಲಿ ಇದ್ದಾರೆ. ಈ ಜಾತ್ರೆಗೆ ಹೊರ ಜಿಲ್ಲೆಗಳಿಂದಲೂ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.