ಕೊಪ್ಪಳ: ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಾರ್ವಜನಿಕರಿಂದ ದೂರುಗಳಿದ್ದು, ಆರೋಪಿತ ಅವರನ್ನು ವರ್ಗಾವಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕೆಲ ಅಧಿಕಾರಿಗಳಿಗೆ ಕಾನೂನಿನ ಜ್ಞಾನವಿಲ್ಲ, ಹತ್ತಾರು ವರ್ಷಗಳಿಂದ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.
ರಾಯರಡ್ಡಿ ಪತ್ರ ಬರೆದ ದಿನವೇ ಇಲಾಖೆಯ ಬಳ್ಳಾರಿ ವಲಯದ ಅಧಿಕಾರಿಗಳು ತಮ್ಮ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದು ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.