ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕನಿಗೆ 10 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 14:34 IST
Last Updated 5 ಜನವರಿ 2021, 14:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಪ್ಪಳ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಶಿಕ್ಷಕ ಅಂದಪ್ಪ ನಿಂಗೋಜಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂಸೆಷನ್ಸ್ ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಶಂಕರ ಎಂ.ಜಾಲವಾದಿ ತೀರ್ಪು ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಶಿಕ್ಷಕ ಅಂದಪ್ಪ ನಿಂಗೋಜಿ ಎಂಬ ವ್ಯಕ್ತಿ ಬಾಲಕಿಯನ್ನು ಆಗಾಗ ಸ್ಟಾಪ್ ರೂಮ್‌ಗೆ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದು, 2015 ಜ.26 ರ ಧ್ವಜಾರೋಹಣವಾದ 3 ರಿಂದ 4 ದಿನಗಳ ನಂತರ ಬಾಲಕಿ ತನ್ನ ಮನೆಯಲ್ಲಿದ್ದಾಗ ಆರೋಪಿ ತನ್ನ ಮನೆಗೆ ಕರೆದುಕೊಂಡು ಹೋಗಿ ಬಾಲಕಿ ಅಪ್ರಾಪ್ತಳು ಎಂದು ತಿಳಿದಿದ್ದರೂ ಕೂಡ ಬಲತ್ಕಾರಮಾಡಿದ್ದಾನೆ ಎಂದು ದೂರು ದಾಖಲಾಗಿತ್ತು. ದೂರಿನ ಆಧಾರದ ಮೇಲೆಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದ್ದರಿಂದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹30 ಸಾವಿರದಂಡ ವಿಧಿಸಲಾಗಿದೆ.

ADVERTISEMENT

ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ವಕೀಲ ಎಂ.ಎ ಪಾಟೀಲ, ಕೆ.ನಾಗರಾಜ ಆಚಾರ್ ಹಾಗೂ ಟಿ.ಅಂಬಣ್ಣವಾದ ಮಂಡಿಸಿದ್ದರು ಎಂದು ಜಿಲ್ಲಾ ಹಾಗೂಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲರಾದ ಬಂಡಿ ಅಪರ್ಣ ಎಂ.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.