ADVERTISEMENT

‘ಆಮ್ಲಜನಕ ಕೋವಿಡ್ ಚಿಕಿತ್ಸಾ ಕೇಂದ್ರ ಶೀಘ್ರ ಆರಂಭ’

​ಪ್ರಜಾವಾಣಿ ವಾರ್ತೆ
Published 29 ಮೇ 2021, 11:36 IST
Last Updated 29 ಮೇ 2021, 11:36 IST
ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಉಪ ವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಉಪ ವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು   

ಕನಕಗಿರಿ: ‘ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಆಮ್ಲಜನಕ ಹಾಗೂ ವೆಂಟಿಲೇಟರ್ ಸೌಲಭ್ಯಯುಳ್ಳ ಕೋವಿಡ್ ಚಿಕಿತ್ಸಾ ಕೇಂದ್ರ ಆರಂಭಿಸಲಾಗುವುದು’ ಎಂದು ಉಪ ವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯಕ್ಕೆ ಶುಕ್ರವಾರ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದ ನಂತರ ಮಾತನಾಡಿದರು.

ಈ ಆಸ್ಪತ್ರೆ ವ್ಯಾಪ್ತಿಗೆ ಹಲವಾರು ಗ್ರಾಮಗಳು ಬರುತ್ತವೆ. ಕೊರೊನಾ ಸೋಂಕಿತರಿಗೆ ಅನುಕೂಲ ಆಗಲಿ ಎನ್ನುವ ಉದ್ದೇಶದಿಂದ ಜಿಲ್ಲಾಡಳಿತ 30 ಬೆಡ್ ಹೊಂದಿರುವ ಆಸ್ಪತ್ರೆ ತೆರೆಯಲು ಸಿದ್ದತೆ ನಡೆಸಿದೆ. ಸಣ್ಣಪುಟ್ಟ ಕೆಲಸಗಳನ್ನು ಮುಗಿಸಿ ವಾರದೊಳಗೆ ಚಿಕಿತ್ಸಾ ಕೇಂದ್ರ ಆರಂಭಿಸಲಾಗುತ್ತದೆ ಎಂದು ಅವರು ತಿಳಿಸಿದರು.

ADVERTISEMENT

ಸಾಮಾನ್ಯ ರೋಗಿಗಳ ಚಿಕಿತ್ಸೆಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಸಾಮಾನ್ಯ ಕಾಯಿಲೆಗಳಿಂದ ಬಳಲುವವರ ಆರೋಗ್ಯವನ್ನು ಸಹ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಪ್ರೊಬೇಷನರಿ ಉಪ ವಿಭಾಗಾಧಿಕಾರಿ ರಜನೀಕಾಂತ, ತಹಶೀಲ್ದಾರ್ ರವಿ ಅಂಗಡಿ ಹಾಗೂ ಆರೋಗ್ಯ ಇಲಾಖೆಯ ಶ್ರೀನಿವಾಸ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.