ADVERTISEMENT

ಗ್ರಾಮೀಣ ಭಾಗಗಳಲ್ಲಿ ಜಾಗೃತಿ ಮೂಡಿಸಿ: ಎಂ.ಪಿ.ಮಾರುತಿ

ಕೋವಿಡ್ ಜಾಗೃತಿ ಎಲ್‌ಇಡಿ ವಾಹನಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಚಾಲನೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 16:43 IST
Last Updated 14 ನವೆಂಬರ್ 2020, 16:43 IST
ಕೊಪ್ಪಳದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಕೋವಿಡ್-19 ಜಾಗೃತಿ ವಾಹನಕ್ಕೆ ಚಾಲನೆ ನೀಡಲಾಯಿತು
ಕೊಪ್ಪಳದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಕೋವಿಡ್-19 ಜಾಗೃತಿ ವಾಹನಕ್ಕೆ ಚಾಲನೆ ನೀಡಲಾಯಿತು   

ಕೊಪ್ಪಳ: ‘ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೋವಿಡ್-19 ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿಶನಿವಾರ ಕೋವಿಡ್-19 ಜಾಗೃತಿ ಮೂಡಿಸುವ ಎಲ್‌ಇಡಿ ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಎಲ್‌ಇಡಿ ವಾಹನಗಳಿಂದ ಕೋವಿಡ್-19 ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲೆಗೆ ಇಲಾಖೆಯ ಎರಡು ವಾಹನಗಳು ಇವೆ. 153 ಗ್ರಾಮ ಪಂಚಾಯಿತಿ ವ್ಯಾಪ್ತಿಯ 180 ಗ್ರಾಮಗಳಿಗೆ, 7 ತಾಲ್ಲೂಕುಗಳ 9 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 25 ಸಿಎಚ್‌ಸಿ ಮತ್ತು ಪಿಎಚ್‌ಸಿ ಗಳಲ್ಲಿ ವಾಹನಗಳು ಸಂಚರಿಸಲಿವೆ. ಗ್ರಾಮೀಣ ಭಾಗದ ಜನರು ಆರೋಗ್ಯದ ಹಿತದೃಷ್ಟಿಯಿಂದ ಜಾಗೃತಿ ವಾಹನಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ADVERTISEMENT

ಎಸಿ ನಾರಾಯಣರಡ್ಡಿ ಕನಕರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಲಿಂಗರಾಜು.ಟಿ., ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ.ಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.