ADVERTISEMENT

ಸೋಂಕಿತ ಸಾವು: ಸಂಬಂಧಿಕರಿಂದ ಗಲಾಟೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 0:48 IST
Last Updated 1 ಜೂನ್ 2021, 0:48 IST

ಗಂಗಾವತಿ: ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದ ಕೊರೊನಾ ಸೋಂಕಿತರೊಬ್ಬರು ಮೃತಪಟ್ಟ ಕಾರಣ ಅವರ ಸಂಬಂಧಿಕರು ಸೋಮವಾರ ಆಸ್ಪತ್ರೆಯಲ್ಲಿ ಗಲಾಟೆ ನಡೆಸಿದ್ದಾರೆ.

ಕಾರಟಗಿ ತಾಲ್ಲೂಕಿನ ದೇವಪ್ಪ (75) ಕಳೆದ ಮೂರು ದಿನಗಳ ಹಿಂದೆ ನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸಂಬಂಧಿಕರು ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಆಸ್ಪತ್ರೆ ಸಿಬ್ಬಂದಿ ನಗರಠಾಣೆ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT