ADVERTISEMENT

ನಿವಾಸಿಗಳಿಗೆ ಕೊರೊನಾ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 2:52 IST
Last Updated 30 ಸೆಪ್ಟೆಂಬರ್ 2020, 2:52 IST
ತಾವರಗೇರಾ ಪಟ್ಟಣದ ಮಲ್ಲಿಕಾರ್ಜುನ ನಗರದಲ್ಲಿ ನಿವಾಸಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಯಿತು
ತಾವರಗೇರಾ ಪಟ್ಟಣದ ಮಲ್ಲಿಕಾರ್ಜುನ ನಗರದಲ್ಲಿ ನಿವಾಸಿಗಳಿಗೆ ಕೊರೊನಾ ಪರೀಕ್ಷೆ ಮಾಡಲಾಯಿತು   

ತಾವರಗೇರಾ: ಸಮುದಾಯ ಆರೋಗ್ಯ ಕೇಂದ್ರ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಪಟ್ಟಣದ ಮಲ್ಲಿಕಾರ್ಜುನ ನಗರದಲ್ಲಿ ನಿವಾಸಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಯಿತು.

ಕುಷ್ಟಗಿ ತಹಶೀಲ್ದಾರ್‌ ಎಂ. ಸಿದ್ದೇಶ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಹಿರಿಯ ಆರೋಗ್ಯ ಸಹಾಯಕಿ ನಿರ್ಮಲಾ ಪಾಟೀಲ, ಸಮುದಾಯ ಆರೋಗ್ಯ ಕೇಂದ್ರದ ಜಯರಾಜ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ದುರಗಮ್ಮ , ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಂಕರಕಾಳೆ, ಆರೋಗ್ಯ ಅಧಿಕಾರಿ ಪ್ರಾಣೇಶ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.