ADVERTISEMENT

ಪೌರಕಾರ್ಮಿಕರಿಂದ ಕೋವಿಡ್ ಜಾಗೃತಿ

​ಪ್ರಜಾವಾಣಿ ವಾರ್ತೆ
Published 13 ಮೇ 2021, 5:26 IST
Last Updated 13 ಮೇ 2021, 5:26 IST
ಯಲಬುರ್ಗಾ ಪಟ್ಟಣದಲ್ಲಿ ಪೌರಕಾರ್ಮಿಕರು ಜಾಗೃತಿ ಮೂಡಿಸಿದರು
ಯಲಬುರ್ಗಾ ಪಟ್ಟಣದಲ್ಲಿ ಪೌರಕಾರ್ಮಿಕರು ಜಾಗೃತಿ ಮೂಡಿಸಿದರು   

ಯಲಬುರ್ಗಾ: ಇಲ್ಲಿಯ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು ಪ್ರತಿದಿನ ಕೋವಿಡ್ ಜಾಗೃತಿ ಮೂಡಿಸುತ್ತಿದ್ದಾರೆ.

ಲಾಕ್‍ಡೌನ್ ಮಾರ್ಗಸೂಚಿ ಪಾಲಿಸಬೇಕು. ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಧ್ವನಿವರ್ಧಕದ ಮೂಲಕ ಮನವಿ ಮಾಡುತ್ತಿದ್ದಾರೆ.

ಕಸ ವಿಲೇವಾರಿ ಕಾಯಕದ ನಂತರ ಪಟ್ಟಣ ಪಂಚಾಯಿತಿ ಸಿಬ್ಬಂದಿ ಮತ್ತೆ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ತಿರುಗಾಡಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ADVERTISEMENT

‘ಊರ ತುಂಬೆಲ್ಲಾ ಸಂಚರಿಸಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ’ ಎಂದು ಸ್ಥಳೀಯ ಮುಖಂಡ ಬಸವರಾಜ ಪೂಜಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು ವ್ಯಾಪಕ ಪ್ರಚಾರ ಕೈಗೊಂಡು ಜನರು ರೋಗದಿಂದ ಮುಕ್ತರಾಗಲು ಕ್ರಮಕೈಗೊಳ್ಳುತ್ತಿದ್ದಾರೆ. ದೇಶವೇ ಸಂಕಷ್ಟದಲ್ಲಿರುವ ಪ್ರಸ್ತುತ ಸಂದರ್ಭದಲ್ಲಿ ಜನರ ಹಿತಕ್ಕಾಗಿ ಹೆಚ್ಚಿನ ಕೆಲಸ ಮಾಡುತ್ತಿರುವುದರಿಂದ ಬೇಸರವಾಗಿಲ್ಲ. ಸಾರ್ವಜನಿಕರು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ ಎಂದು ಸಿಬ್ಬಂದಿ ರಾಮಪ್ಪ ಹಾಗೂ ಪೌರ ಕಾರ್ಮಿಕ ರೇಣುಕಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.