ಕೊಪ್ಪಳ: ಜಿಲ್ಲೆಯಲ್ಲಿ ಶನಿವಾರ ಕೊರೊನಾ ಸೋಂಕಿನಿಂದಾಗಿ ಒಬ್ಬರು ಸಾವನ್ನಪ್ಪಿದ್ದು, ಇದರಿಂದಾಗಿ ಮೃತರ ಸಂಖ್ಯೆ 223ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಶನಿವಾರ308 ಜನರಿಗೆ ಕೋವಿಡ್ ದೃಢಪಟ್ಟಿದ್ದು, ಈ ಪೈಕಿ ಗಂಗಾವತಿ-104, ಕೊಪ್ಪಳ-108, ಕುಷ್ಟಗಿ-50, ಯಲಬುರ್ಗಾ-46 ಜನರಿಗೆ ಸೋಂಕು ತಗುಲಿದೆ. ಇದರಿಂದ ಒಟ್ಟು ಸೋಂಕಿತರ ಪ್ರಮಾಣ 10,434ಕ್ಕೆ ಏರಿಕೆಯಾಗಿದೆ.
ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅವರು
ತಿಳಿಸಿದ್ದಾರೆ.
189ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 8,089 ಕೋವಿಡ್‌ನಿಂದ ಗುಣಮುಖರಾಗಿದ್ದು, ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.