ಅಳವಂಡಿ: ಸಮೀಪದ ಕವಲೂರ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಹಕ ಸೇವಾ ಕೇಂದ್ರ ಉದ್ಘಾಟಿಸಲಾಯಿತು.
ಯೋಜನೆಯ ವಲಯ ಮೇಲ್ವಿಚಾರಕ ಮೋಟಯ್ಯ ಮಾತನಾಡಿ,‘ಈ ಭಾಗದ ಜನರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಯೋಜನೆಯ ಗ್ರಾಹಕ ಸೇವಾ ಕೇಂದ್ರ ತೆರೆಯಲಾಗಿದೆ. ಕೇಂದ್ರದ ಮೂಲಕ ಹಲವು ಸೇವೆಗಳನ್ನು ಒದಗಿಸಲಾಗುವುದು’ ಎಂದು ಹೇಳಿದರು.
ರಾಜ್ಯದಲ್ಲಿ 6000 ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ 500 ಕೇಂದ್ರ ತೆರೆಯಲಾಗಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆಯಬೇಕು ಎಂದರು.
ಮುಖಂಡರಾದ ಮಹಾಂತೇಶ ಸಿಂದೋಗಿಮಠ, ಮುತ್ತಣ್ಣ ಬಿಸರಳ್ಳಿ, ಸಾವಿತ್ರಿ ಹಳ್ಳಿಗುಡಿ, ಶೋಭಾ ಬಾರಕೇರ, ಗ್ರಾ.ಪಂ. ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.