ಬಂಧನ
(ಪ್ರಾತಿನಿಧಿಕ ಚಿತ್ರ)
ಗಂಗಾವತಿ: ನಗರದ ವಿವಿಧ ವಾರ್ಡುಗಳಲ್ಲಿ ಸಿಲಿಂಡರ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನ ನಗರ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಗಂಗಾವತಿಯ ಗೌಸ್, ಅನ್ವರ್, ಅಕ್ರಮ್ ಬಂಧಿತರು. ಅವರಿಂದ 11 ಸಿಲಿಂಡರ್, 4 ಮೋಟರ್ ಸೈಕಲ್‌ಗಳು ವಶಕ್ಕೆ ಪಡೆದುಕೊಳ್ಳಲಾಗಿದೆ.
ಗಂಗಾವತಿ ಹೊಸಳ್ಳಿ ರಸ್ತೆಯ ರಮೇಶ ನಾಯಕ, ಹನುಮಂತಪ್ಪ ಕುರುಬರ, ಜಯನಗರ ನಾರಾಯಣಪ್ಪ ನಾಯಕ ಎನ್ನುವವರ ಮನೆಯಲ್ಲಿ ಸಿಲಿಂಡರ್ ಕಳ್ಳತನವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಭಾಗವಾಗಿ ಅಧಿಕಾರಿಗಳು ಮೂವರು ಆರೋಪಿಗಳನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.