ADVERTISEMENT

ಗ್ರಾಮ ವಾಸ್ತವ್ಯ ಕಾರ್ಯಕ್ರಮ: ಸಮಸ್ಯೆಗಳ ಸ್ಥಳಕ್ಕೆ ಡಿ.ಸಿ ಭೇಟಿ.

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 9:57 IST
Last Updated 16 ಅಕ್ಟೋಬರ್ 2021, 9:57 IST
ಗ್ರಾಮದ ಸ್ಮಶಾನ ಜಾಗೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು
ಗ್ರಾಮದ ಸ್ಮಶಾನ ಜಾಗೆಯನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು   

ಗುಳದಾಳ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಹಣವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳದಾಳ (ಮಸಾರಿ ಕ್ಯಾಂಪ್) ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಲ್ಲೂಕು ಆಡಳಿತ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗಳ ಕುರಿತು ಮನೆ ಬಾಗಿಲಿಗೆ ತೆರಳಿ, ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೆ ಪರಿಹಾರ ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಅದರಂತೆ ಗ್ರಾಮಸ್ಥರ ಬಹು ವರ್ಷಗಳ ಬೇಡಿಕೆಯಾದ ಕೆಸಕ್ಕಿ ಹಂಚಿನಾಳ ಗ್ರಾಮದ ದಿಂದ ಗುಳದಾಳ ಗ್ರಾಮಕ್ಕೆ ರಸ್ತೆ ಸಂಪರ್ಕ, ಸಾರ್ವಜನಿಕ ರುದ್ರಭೂಮಿ, ಚರಂಡಿ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರು, ನ್ಯಾಯಬೆಲೆ ಅಂಗಡಿ, ಪಶು ಆಸ್ಪತ್ರೆ, ಸಮಸ್ಯೆಗಳ ಸ್ಥಳಕ್ಕೆ ಜಿಲ್ಲಾಧಿಕಾರಿ, ಸಿಇಓ, ಎ.ಸಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ದಾಖಲೆ ಸಲ್ಲಿಸುವಂತೆ ಸೂಚಿನೆ ನೀಡಿದರು.

ADVERTISEMENT

ಈ ವೇಳೆಯಲ್ಲಿ ಕಂದಾಯ, ಪಶುಸಂಗೋಪನೆ, ಆಹಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪ‌ಸಂಖ್ಯಾತರ ಇಲಾಖೆ, ಮೀನುಗಾರಿಕೆ ಇಲಾಖೆ, ನರೇಗಾ, ಆರೋಗ್ಯ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.